BDL Recruitment 2022: ರಕ್ಷಣಾ ಸಚಿವಾಲಯದ ಕಂಪನಿಯಾದ ಭಾರತ್ ಡೈನಾಮಿಕ್ಸ್ ಲಿಮಿಟೆಡ್ ದೇಶಾದ್ಯಂತ ಇರುವ ವಿವಿಧ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಜನೆಗಳಿಗೆ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಂಪನಿಯು ಹೊರಡಿಸಿರುವ ನೇಮಕಾತಿ ಜಾಹೀರಾತಿನ ಪ್ರಕಾರ, ವಿವಿಧ ವಿಭಾಗಗಳಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಡಿಪ್ಲೋಮಾ ಅಸಿಸ್ಟೆಂಟ್ ಸೇರಿದಂತೆ ಒಟ್ಟು 80 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿಯು ಒಂದು ವರ್ಷದವರೆಗೆ ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಆ ಬಳಿಕ ಮೂರು ವರ್ಷಗಳವರೆಗೆ ವಿಸ್ತರಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತ್ ಡೈನಾಮಿಕ್ಸ್ ಲಿಮಿಟೆಡ್ನ ಅಧಿಕೃತ ವೆಬ್‌ಸೈಟ್ bdl-india.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 80
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 14 ಮೇ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 4 ಜೂನ್ 2022
ವಯೋಮಿತಿ:
ಅಭ್ಯರ್ಥಿಗಳ ಗರಿಷ್ಠ ವಯಸ್ಸು 28 ವರ್ಷಗಳು. ಎಸ್‌ಸಿ, ಎಸ್‌ಟಿಗೆ 5 ವರ್ಷ, ಒಬಿಸಿಗೆ ಮೂರು ವರ್ಷಗಳ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಹೇಗೆ:
ಅರ್ಹತಾ ಪರೀಕ್ಷೆಯ ಅಂಕಗಳು, ಪೂರ್ವ ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಅರ್ಜಿಯ ವಿವರಗಳ ಆಧಾರದ ಮೇಲೆ ಸಿದ್ಧಪಡಿಸಿದ ಪಟ್ಟಿಯ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.