BDL Recruitment 2025: ಬಿಡಿಎಲ್ ನಲ್ಲಿ ನೇಮಕಾತಿ; ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ
ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ಹಲವು ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಮ್ಯಾನೇಜ್‌ಮೆಂಟ್ ಟ್ರೈನಿ (MT) ಸೇರಿದಂತೆ 46 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 21. ಅರ್ಹತೆ, ವಯೋಮಿತಿ ಮತ್ತು ಅರ್ಜಿ ಶುಲ್ಕದ ಮಾಹಿತಿಯನ್ನು BDL ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪಡೆಯಬಹುದು. ಉತ್ತಮ ಸಂಬಳ ಪ್ಯಾಕೇಜ್‌ಗಳನ್ನು ನೀಡಲಾಗುವುದು.

ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವ ಯುವಕರಿಗೆ ಒಂದು ದೊಡ್ಡ ಸುದ್ದಿಯಿದೆ. ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ಮ್ಯಾನೇಜ್‌ಮೆಂಟ್ ಟ್ರೈನಿ (MT) ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯು ಜನವರಿ 30 ರಿಂದ ಪ್ರಾರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 21ರ ಒಳಗೆ ಅರ್ಜಿ ಸಲ್ಲಿಸತಕ್ಕದ್ದು.
ಅರ್ಹ ಅಭ್ಯರ್ಥಿಗಳು ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ನ ಅಧಿಕೃತ ವೆಬ್‌ಸೈಟ್(bdl-india.in) ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 21. ಆದರೆ ಅರ್ಜಿ ನಮೂನೆಯ ಹಾರ್ಡ್ ಕಾಪಿಯನ್ನು ಫೆಬ್ರವರಿ 28, 2025 ರೊಳಗೆ ಸಲ್ಲಿಸಬೇಕು.
ಈ ಅಭಿಯಾನದ ಮೂಲಕ ಮ್ಯಾನೇಜ್‌ಮೆಂಟ್ ಟ್ರೈನಿ (ಎಂಟಿ) 46 ಹುದ್ದೆಗಳು ಮತ್ತು ಎಎಂ (ಕಾನೂನು), ಎಸ್‌ಎಂ (ಸಿವಿಲ್), ಡಿಜಿಎಂ (ಸಿವಿಲ್) ತಲಾ 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ನೇಮಕಾತಿ ಡ್ರೈವ್‌ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು BE/B.Tech/MBA/MA/ Post Graduate Diploma/ICAI/ICWAI ಇತ್ಯಾದಿಗಳಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 27 ರಿಂದ 50 ವರ್ಷದೊಳಗಿರಬೇಕು. ಆದರೆ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶ; ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ
ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಕಾಯ್ದಿರಿಸದ, EWS ಮತ್ತು OBC (NCL) ವರ್ಗದ ಅಭ್ಯರ್ಥಿಗಳು ರೂ 500 ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ SC/ ST/ PWBD/ ಮಾಜಿ ಸೈನಿಕರು/ ಆಂತರಿಕ ಖಾಯಂ ಉದ್ಯೋಗಿಗಳು ಅರ್ಜಿ ಸಲ್ಲಿಸಬೇಕಾಗಿಲ್ಲ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ಸಂಬಳ ನೀಡಲಾಗುವುದು. ಮ್ಯಾನೇಜ್‌ಮೆಂಟ್ ಟ್ರೈನಿ (MT) ವಾರ್ಷಿಕ 15.91 ಲಕ್ಷ ರೂ. ಎಎಂ ಹುದ್ದೆಗೆ ರೂ 15.91 ಲಕ್ಷ ವಾರ್ಷಿಕ ಪ್ಯಾಕೇಜ್, ಎಸ್ಎಂ ಹುದ್ದೆಗೆ ರೂ 25.26 ಲಕ್ಷ ವಾರ್ಷಿಕ ಪ್ಯಾಕೇಜ್ ಮತ್ತು ಡಿಜಿಎಂ ಹುದ್ದೆಗೆ ರೂ 28.37 ಲಕ್ಷ ವಾರ್ಷಿಕ ಪ್ಯಾಕೇಜ್ ನೀಡಲಾಗುವುದು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ