ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ನಲ್ಲಿನ 86 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ನ ಅಧಿಕೃತ ವೆಬ್‌ಸೈಟ್ becilregistration.com ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ವೇತನವಾಗಿ 21,184/-ರೂ ಸಿಗಲಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ 750/-ರೂ ಅರ್ಜಿ ಶುಲ್ಕವಿರುತ್ತದೆ. ಹಾಗೆಯೇ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 22, 2022.
ಅರ್ಜಿ ಸಲ್ಲಿಸುವುದು ಹೇಗೆ?
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ www.becil.com ಗೆ ಭೇಟಿ ನೀಡುವ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.