BEL Recruitment 2022: ಬಿಇಎಲ್​ನ 150 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 55 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Jul 20, 2022 | 7:20 PM

BEL Bangalore Project Engineer Recruitment 2022: ಈ ನೇಮಕಾತಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನ, ಆಯ್ಕೆ ವಿಧಾನ ಇತ್ಯಾದಿ ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿ ಈ ಕೆಳಗಿನಂತಿವೆ.

BEL Recruitment 2022: ಬಿಇಎಲ್​ನ 150 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 55 ಸಾವಿರ ರೂ.
BEL Recruitment 2022
Follow us on

BEL Recruitment 2022: ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬೆಂಗಳೂರಿನಲ್ಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಗುತ್ತಿಗೆ ಆಧಾರದ ಮೇಲೆ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನ, ಆಯ್ಕೆ ವಿಧಾನ ಇತ್ಯಾದಿ ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ: 150

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಹುದ್ದೆಗಳ ಹೆಸರುಗಳು: ಟ್ರೈನಿ ಇಂಜಿನಿಯರ್, ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳು

ವಯೋಮಿತಿ: ಅರ್ಜಿದಾರರ ವಯಸ್ಸು ಆಗಸ್ಟ್ 1, 2022 ರಂತೆ  32 ವರ್ಷಗಳನ್ನು ಮೀರಬಾರದು.

ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.30,000 ರಿಂದ ರೂ.55,000 ವರೆಗೆ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆಗಳು: ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಸಂಬಂಧಿತ ವಿಷಯದಲ್ಲಿ ಕನಿಷ್ಠ 55% ಅಂಕಗಳೊಂದಿಗೆ B.Sc/ BE/ B.Tech ಉತ್ತೀರ್ಣರಾಗಿರಬೇಕು. ಅಲ್ಲದೆ ಸಂಬಂಧಿತ ಕೆಲಸದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ನೇರವಾಗಿ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ:

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ: ರೂ.472
ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ: ರೂ.177

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 3, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

 

 

Published On - 7:20 pm, Wed, 20 July 22