
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ವಿವಿಧ ಪ್ರೊಬೇಷನರಿ ಎಂಜಿನಿಯರ್ ಹುದ್ದೆಗಳಿಗೆ ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಅರ್ಜಿ ಪ್ರಕ್ರಿಯೆ ಅಕ್ಟೋಬರ್ 24 ರಿಂದ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಬಿಇಎಲ್‌ನ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 14.
ಕಂಪನಿಯು 340 ಪ್ರೊಬೇಷನರಿ ಎಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ . ಒಟ್ಟು ಹುದ್ದೆಗಳಲ್ಲಿ EII ದರ್ಜೆಯಲ್ಲಿ 175 ಪ್ರೊಬೇಷನರಿ ಎಂಜಿನಿಯರ್ (ಎಲೆಕ್ಟ್ರಾನಿಕ್ಸ್) ಹುದ್ದೆಗಳು, 109 ಪ್ರೊಬೇಷನರಿ ಎಂಜಿನಿಯರ್ (ಮೆಕ್ಯಾನಿಕಲ್) ಹುದ್ದೆಗಳು ಮತ್ತು E-II ದರ್ಜೆಯಲ್ಲಿ 14 ಪ್ರೊಬೇಷನರಿ ಎಂಜಿನಿಯರ್ (ಎಲೆಕ್ಟ್ರಿಕಲ್) ಹುದ್ದೆಗಳು ಸೇರಿವೆ. ಈ ಒಟ್ಟು ಹುದ್ದೆಗಳ ಸಂಖ್ಯೆಯಲ್ಲಿ, ಸಾಮಾನ್ಯ ಸೇರಿದಂತೆ ಇತರ ವರ್ಗಗಳಿಗೂ ಹುದ್ದೆಗಳನ್ನು ಕಾಯ್ದಿರಿಸಲಾಗಿದೆ. ಈ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತೆಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ
ವಿವಿಧ ಪ್ರೊಬೇಷನರಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ವಿಭಾಗದಲ್ಲಿ ನಾಲ್ಕು ವರ್ಷಗಳ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು. ಅರ್ಜಿದಾರರು 25 ವರ್ಷ ಮೀರಬಾರದು. ಗರಿಷ್ಠ ವಯೋಮಿತಿಯಲ್ಲಿ ಒಬಿಸಿ ವರ್ಗಗಳಿಗೆ ಮೂರು ವರ್ಷ ಮತ್ತು ಎಸ್‌ಸಿ ಮತ್ತು ಎಸ್‌ಟಿ ವರ್ಗಗಳಿಗೆ ಐದು ವರ್ಷ ಸಡಿಲಿಕೆ ನೀಡಲಾಗಿದೆ.
ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 1180 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅರ್ಜಿದಾರರಿಗೆ ಅರ್ಜಿ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ: ರೈಲ್ವೆಯಲ್ಲಿ 8500 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು
ಅಭ್ಯರ್ಥಿಗಳನ್ನು CBT ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಯಶಸ್ವಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. CBT ಪರೀಕ್ಷೆಯು 85 ಅಂಕಗಳು ಮತ್ತು ಸಂದರ್ಶನವು 15 ಅಂಕಗಳನ್ನು ಹೊಂದಿರುತ್ತದೆ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ