BEL Recruitment 2022: ಉತ್ತಮ ವೇತನದ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
BEL Recruitment 2022: ಸಾಮಾನ್ಯ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಇನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿ ಯಾವುದೇ ಶುಲ್ಕ ಇರುವುದಿಲ್ಲ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಟ್ರೈನಿ ಇಂಜಿನಿಯರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ bel-india.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇಲ್ಲಿ ಒಟ್ಟು 8 ಹುದ್ದೆಗಳು ಖಾಲಿಯಿದ್ದು, ಜನವರಿ 15ರ ಒಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ನೇಮಕಾತಿಯ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳು ಹೆಸರು ಮತ್ತು ಒಟ್ಟು ಹುದ್ದೆಗಳು: ಹುದ್ದೆಗಳ ಹೆಸರು- ಟ್ರೈನಿ ಇಂಜಿನಿಯರ್ ಹುದ್ದೆಗಳು ಒಟ್ಟು ಹುದ್ದೆಗಳ ಸಂಖ್ಯೆ- 8
ವಿದ್ಯಾರ್ಹತೆ: ಅಭ್ಯರ್ಥಿಯು ಇಂಜಿನಿಯರಿಂಗ್ (ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ E&T/ ಟೆಲಿಕಮ್ಯುನಿಕೇಶನ್) ವಿಭಾಗಗಳಲ್ಲಿ ಪ್ರತಿಷ್ಠಿತ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪೂರ್ಣ ಸಮಯದ BE/B.Tech ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು . ಅಷ್ಟೇ ಅಲ್ಲದೆ ಎಲ್ಲಾ ಸೆಮಿಸ್ಟರ್‌ಗಳಲ್ಲಿ 55% ಒಟ್ಟು ಅಂಕಗಳನ್ನು ಪಡೆದಿರಬೇಕು.
ವೇತನ: ಮೊದಲ ವರ್ಷ: 30,000 ರೂ. ಎರಡನೇ ವರ್ಷ: 35,000 ರೂ. ಮೂರನೇ ವರ್ಷ: 40,000 ರೂ.
ವಯೋಮಿತಿ: ಅಭ್ಯರ್ಥಿಯು 28 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಹಾಗೆಯೇ ಹಿಂದುಳಿದ ವರ್ಗ (ಒಬಿಸಿ) ದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ 10 ವರ್ಷದವರೆಗೆ ವಿನಾಯಿತಿ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಇನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿ ಯಾವುದೇ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ: ಒಟ್ಟು ಅಂಕಗಳು, ಸಂಬಂಧಿತ ಪೋಸ್ಟ್-ಅರ್ಹತೆಯ ಅನುಭವ, ಅಂಕಗಳ ಸರಾಸರಿ ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/01/2022
ಈ ನೇಮಕಾತಿಯ ಕುರಿತಾದ ಮತ್ತಷ್ಟು ಮಾಹಿತಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್..!
ಇದನ್ನೂ ಓದಿ: Ravindra Jadeja: ಸ್ಟಾರ್ ಆಲ್ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!
ಇದನ್ನೂ ಓದಿ: Rohit Sharma: ಫಿಟ್ನೆಸ್ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?
ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್ಸಿಬಿ ನಾಯಕ
(BEL Recruitment 2022: Apply for Trainee Engineer posts)
Published On - 7:33 pm, Mon, 3 January 22