ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಟ್ರೈನಿ ಇಂಜಿನಿಯರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ bel-india.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇಲ್ಲಿ ಒಟ್ಟು 8 ಹುದ್ದೆಗಳು ಖಾಲಿಯಿದ್ದು, ಜನವರಿ 15ರ ಒಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ನೇಮಕಾತಿಯ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳು ಹೆಸರು ಮತ್ತು ಒಟ್ಟು ಹುದ್ದೆಗಳು:
ಹುದ್ದೆಗಳ ಹೆಸರು- ಟ್ರೈನಿ ಇಂಜಿನಿಯರ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ- 8
ವಿದ್ಯಾರ್ಹತೆ:
ಅಭ್ಯರ್ಥಿಯು ಇಂಜಿನಿಯರಿಂಗ್ (ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ E&T/ ಟೆಲಿಕಮ್ಯುನಿಕೇಶನ್) ವಿಭಾಗಗಳಲ್ಲಿ ಪ್ರತಿಷ್ಠಿತ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪೂರ್ಣ ಸಮಯದ BE/B.Tech ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು . ಅಷ್ಟೇ ಅಲ್ಲದೆ ಎಲ್ಲಾ ಸೆಮಿಸ್ಟರ್‌ಗಳಲ್ಲಿ 55% ಒಟ್ಟು ಅಂಕಗಳನ್ನು ಪಡೆದಿರಬೇಕು.
ವೇತನ:
ಮೊದಲ ವರ್ಷ: 30,000 ರೂ.
ಎರಡನೇ ವರ್ಷ: 35,000 ರೂ.
ಮೂರನೇ ವರ್ಷ: 40,000 ರೂ.
ವಯೋಮಿತಿ:
ಅಭ್ಯರ್ಥಿಯು 28 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಹಾಗೆಯೇ ಹಿಂದುಳಿದ ವರ್ಗ (ಒಬಿಸಿ) ದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ 10 ವರ್ಷದವರೆಗೆ ವಿನಾಯಿತಿ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಇನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿ ಯಾವುದೇ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಒಟ್ಟು ಅಂಕಗಳು, ಸಂಬಂಧಿತ ಪೋಸ್ಟ್-ಅರ್ಹತೆಯ ಅನುಭವ, ಅಂಕಗಳ ಸರಾಸರಿ ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/01/2022
ಈ ನೇಮಕಾತಿಯ ಕುರಿತಾದ ಮತ್ತಷ್ಟು ಮಾಹಿತಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್..!
ಇದನ್ನೂ ಓದಿ: Ravindra Jadeja: ಸ್ಟಾರ್ ಆಲ್ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!
ಇದನ್ನೂ ಓದಿ: Rohit Sharma: ಫಿಟ್ನೆಸ್ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?
ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್ಸಿಬಿ ನಾಯಕ
(BEL Recruitment 2022: Apply for Trainee Engineer posts)
Published On - 7:33 pm, Mon, 3 January 22