BEL Recruitment 2022: ಬಿಇಎಲ್ನ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
BEL Recruitment 2022: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
BEL Recruitment 2022: ಭಾರತ್ ಎಲೆಕ್ಟ್ರಾನಿಕ್ಸ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಒಟ್ಟು 13 ಹುದ್ದೆಗಳಿಗೆ ಭರ್ತಿ ನಡೆಯಲಿದ್ದು, ಈ ಹುದ್ದೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.
BEL Recruitment 2022: ನೇಮಾಕಾತಿ ವಿವರಗಳು:
ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ: 13
ಹುದ್ದೆಯ ಹೆಸರು: ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳು
ವಯೋಮಿತಿ: ಅಭ್ಯರ್ಥಿಗಳ ವಯಸ್ಸು 32 ವರ್ಷಗಳನ್ನು ಮೀರಬಾರದು.
ವೇತನ ಶ್ರೇಣಿ: ಮೊದಲ ವರ್ಷಕ್ಕೆ 40,000 ರೂ.ವರೆಗೆ ಮತ್ತು ಎರಡನೇ ವರ್ಷಕ್ಕೆ 45,000 ರೂ.ರವರೆಗೆ ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ: ಸಂಬಂಧಿತ ವಿಶೇಷತೆಯಲ್ಲಿ ಬಿಇ/ಬಿಟೆಕ್‌ನಲ್ಲಿ ತೇರ್ಗಡೆಯಾಗಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿ ಕೆಲಸದ ಅನುಭವವನ್ನೂ ಹೊಂದಿರಬೇಕು.
ಆಯ್ಕೆ ವಿಧಾನ: ಶೈಕ್ಷಣಿಕ ಅರ್ಹತೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: 472 ರೂ.
ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಂದರೆ ಅರ್ಜಿಯನ್ನು ಅಂಚೆಯ ಮೂಲಕ ಕಳುಹಿಸಬೇಕಾಗುತ್ತದೆ.
ವಿಳಾಸ: DGM(HR/MR,MS&ADSN), Bharat Electronics Limited, Jalahalli P.O., Bengaluru 560013.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 9, 2022.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.