BEL Recruitment 2024 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಖಾಲಿಯಿರುವ 77 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ವೇತನ ಶ್ರೇಣಿ, ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಟ್ರೈನಿ ಇಂಜಿನಿಯರ್ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ಒಟ್ಟು 77 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಅಧಿಸೂಚನೆಯಲ್ಲಿ 23 ಟ್ರೈನಿ ಇಂಜಿನಿಯರ್ ಮತ್ತು 54 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಒಳಗೊಂಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಬಿಇಎಲ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನವೆಂಬರ್ 9 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
* ಟ್ರೈನಿ ಇಂಜಿನಿಯರ್ – 23 ಹುದ್ದೆಗಳು
* ಪ್ರಾಜೆಕ್ಟ್ ಎಂಜಿನಿಯರ್ – 54 ಹುದ್ದೆಗಳು
ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ
* ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ 2024 ರ ಅಧಿಸೂಚನೆ ಪ್ರಕಾರ ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಬಿ.ಎಸ್‌ಸಿ, ಬಿ.ಇ ಹಾಗೂ ಬಿ.ಟೆಕ್ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದು.
* ಟ್ರೈನಿ ಇಂಜಿನಿಯರ್ – ಐ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 28 ವರ್ಷ ಮತ್ತು ಪ್ರಾಜೆಕ್ಟ್ ಇಂಜಿನಿಯರ್- ಐ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು.
* ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯಿದೆ.
ಅರ್ಜಿ ಶುಲ್ಕಗಳು
* ಎಸ್‌ಸಿ/ಎಸ್‌ಟಿ ಹಾಗೂ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
* ಇನ್ನುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಟ್ರೈನಿ ಇಂಜಿನಿಯರ್ – ಐ ಹುದ್ದೆಗೆ 150 ರೂ. ಹಾಗೂ ಪ್ರಾಜೆಕ್ಟ್ ಇಂಜಿನಿಯರ್- ಐ ಹುದ್ದೆಗೆ 400 ರೂ ಅನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಇದನ್ನೂ ಓದಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಮಾಡಲಾಗುತ್ತದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಟ್ರೈನಿ ಇಂಜಿನಿಯರ್ – ಐ ಹುದ್ದೆಗೆ 30,000 ರೂ. – 40,000 ರೂ. ಹಾಗೂ ಪ್ರಾಜೆಕ್ಟ್ ಇಂಜಿನಿಯರ್- ಐ ಹುದ್ದೆಗೆ 40,000 ರೂ. – 55,000 ರೂ. ಮಾಸಿಕ ವೇತನವಿರುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ