BEML Recruitment 2025: BEMLನಲ್ಲಿ 27 ಮ್ಯಾನೇಜರ್ ಹುದ್ದೆಗೆ ನೇಮಕಾತಿ; 50,000 ರಿಂದ 2,80,000 ರೂ. ತಿಂಗಳ ವೇತನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮೈಸೂರು, ಬೆಂಗಳೂರಿನಲ್ಲಿ 27 ಹುದ್ದೆಗಳು ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 10 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿವಿಧ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

BEML Recruitment 2025: BEMLನಲ್ಲಿ 27 ಮ್ಯಾನೇಜರ್ ಹುದ್ದೆಗೆ ನೇಮಕಾತಿ; 50,000 ರಿಂದ 2,80,000 ರೂ. ತಿಂಗಳ ವೇತನ
Bharat Earth Movers Limited

Updated on: Dec 26, 2025 | 2:55 PM

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್(BEML) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಮೈಸೂರು, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

BEML ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ( BEML )
  • ಹುದ್ದೆಗಳ ಸಂಖ್ಯೆ: 27
  • ಉದ್ಯೋಗ ಸ್ಥಳ: ಮೈಸೂರು, ಬೆಂಗಳೂರು
  • ಹುದ್ದೆಯ ಹೆಸರು: ಮ್ಯಾನೇಜರ್
  • ಸಂಬಳ: ತಿಂಗಳಿಗೆ 50,000 – 2,80,000 ರೂ.

ಶೈಕ್ಷಣಿಕ ಅರ್ಹತೆ:

BEML ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CA. CMA, ಪದವಿ, BE/ B.Tech, MBA, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, MA, PGDM ಅನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST/ PwD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಆಯ್ಕೆ ಪ್ರಕ್ರಿಯೆ:

  • ಸಂದರ್ಶನ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ BEML ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • BEML ಮ್ಯಾನೇಜರ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • BEML ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • BEML ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಗೆ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ