ಡಿ.8 ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 05, 2024 | 10:14 PM

ಡಿಸೆಂಬರ್ 8 ರಂದು ನಡೆಯುವ ಕರ್ನಾಟಕ ಲೋಕಸೇವಾ ಆಯೋಗದ ಪಿಡಿಒ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ಮೆಟ್ರೋ ರೈಲು ನಿಗಮವು ಭಾನುವಾರದಂದು ಬೆಳಿಗ್ಗೆ 5:30 ರಿಂದ ರೈಲು ಸಂಚಾರ ಆರಂಭಿಸುವುದಾಗಿ ಘೋಷಿಸಿದೆ. ಇದು ಪರೀಕ್ಷಾರ್ಥಿಗಳಿಗೆ ಅನುಕೂಲವಾಗಲಿದೆ. ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಿಂದ ರೈಲುಗಳು 5:30 ಕ್ಕೆ ಹೊರಡಲಿವೆ.

ಡಿ.8 ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ
ಡಿ.8 ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ
Follow us on

ಬೆಂಗಳೂರು, ಡಿಸೆಂಬರ್​​ 05: ಭಾನುವಾರ ಅಂದರೆ ಡಿ. 08ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ (pdo recruitment exam) ನಡೆಯಲಿದೆ. ಹೀಗಾಗಿ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡುವ ಮೂಲಕ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಭಾನುವಾರ ಬೆಳಿಗ್ಗೆ 7 ಗಂಟೆ ಬದಲಾಗಿ, ಬೆಳಿಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ.

ಪ್ರತಿ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಮೆಟ್ರೋ ರೈಲುಗಳು ಸಂಚಾರ ಮಾಡುತ್ತಿತ್ತು. ಆದರೆ ಪಿಡಿಓ ಪರೀಕ್ಷೆ ಹಿನ್ನೆಲೆ ಬೆಳಿಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಮಾಡುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಪ್ರಕಟಣೆಯಲ್ಲಿ ಏನಿದೆ?

ಡಿ. 08 ರಂದು (ಭಾನುವಾರ) ಕನಾಟಕ ಲೋಕಸೋವಾ ಆಯೋಗವು-ಪಂಚಾಯತ್​ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪರೀಕ್ಷೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಬಿಎಂಆರ್​ಸಿಎಲ್​ ಮೆಟ್ರೋ ರೈಲು ಸೇವೆಯನ್ನು ಬೆಳಿಗ್ಗೆ 07:00 ಗಂಟೆಗೆ ಬದಲಾಗಿ 05:30 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್​ ನಿಲ್ದಾಣಗಳಾದ ಮಾದಾವರ, ರೇಷ್ಮೆ ಸಂಸೆ, ಚಲ್ಲಘಟ್ಟ ಮತ್ತು ವೈಟ್​ ಫೀಲ್ಡ್​ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳಿಂದ ಪ್ರಾರಂಭಿಸಲಿದೆ. ಅಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕನಿಂದ ಎಲ್ಲಾ ನಾಲ್ಕು ದಿಕ್ಕಿಗೆ ಮೊದಲ ರೈಲು ಬೆಳಿಗ್ಗೆ 5:30 ಗಂಟೆಗೆ ಹೊರಡಿವೆ.

ಇದನ್ನೂ ಓದಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಜೂನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ

ಈ ಅವಧಿಯಲ್ಲಿ ಅಂದರ ಬೆಳಿಗ್ಗೆ 5.30 ರಿಂದ 7.00 ಗಂಟೆಯವರಗೆ ರೈಲುಗಳು 30 ನಿಮಿಷಗಳ ಅಂತರದಲ್ಲಿ ಚಲಿಸುತ್ತವೆ. ಬೆಳಿಗ್ಗೆ 7:00 ಗಂಟೆಯ ನಂತರ ಎಂದಿನಂತೆ ರೈಲುಗಳು ಚಲಿಸುತ್ತವೆ. ಸಾವಾಜನಿಕರು ಹಾಗೂ ಪರೀಕ್ಷೆಗೆ ಹೋಗುವ ಅಭ್ಯರ್ಥಿಗಳ ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕೆಂದು ಕೋರಲಾಗಿದೆ. ನಗದು ರಹಿತ ಪಾವತಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕ್ಯೂಆರ್​ ಟಿಕೆಟ್​ಗಳ ಮೂಲಕ ಟಿಕೆಟ್​ಗಳನ್ನು ಖರೀದಿಸಲು ಮೆಟ್ರೋ ನಿಗಮವು ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್​ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಡಿ. 08ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10ರಿಂದ 11:30 ರವರೆಗೆ ಪತ್ರಿಕೆ-1 ಸಾಮಾನ್ಯ ಜ್ಞಾನ, ಮಧ್ಯಾಹ್ನ 2ರಿಂದ 4ರ ವರೆಗೆ ಪ್ರತಿಕೆ-2, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್​, ಕಂಫ್ಯೂಟರ್​ ಜ್ಞಾನ ವಿಷಯದ ಕುರಿತು ಪರೀಕ್ಷೆ ನಡೆಯಲಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.