BESCOM Apprenticeship 2022: ಬೆಸ್ಕಾಂನಲ್ಲಿ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ
BESCOM: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು (ಬೆಸ್ಕಾಂ) ಈ ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ ನೀಡಿದೆ. ಈ ಅರ್ಹ ಅಭ್ಯರ್ಥಿಗಳು ಇಲ್ಲಿ ಅರ್ಜಿ ಸಲ್ಲಿಸಬಹುದು.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು (ಬೆಸ್ಕಾಂ) ಈ ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ ನೀಡಿದೆ. ಈ ಅರ್ಹ ಅಭ್ಯರ್ಥಿಗಳು ಇಲ್ಲಿ ಅರ್ಜಿ ಸಲ್ಲಿಸಬಹುದು. ಬೆಸ್ಕಾಂ ತರಬೇತಿ ಪಡೆಯುವ ಅಭ್ಯರ್ಥಿಗಳು ತಮ್ಮ ಮುಖ್ಯ ದಾಖಲೆಗಳನ್ನು ಇಲ್ಲಿ ಸಲ್ಲಿಸಬೇಕು ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಬೇಕಾದ ವಿದ್ಯಾರ್ಹತೆ, ಅಭ್ಯರ್ಥಿಗಳ ವಯೋಮಿತಿ, ಅರ್ಹತೆಗಳು ಸೇರಿದಂತೆ ಹೆಚ್ಚಿನ ವಿವರವನ್ನು ಇಲ್ಲಿ ನೀಡಲಾಗಿದೆ.
ಹುದ್ದೆಗಳ ವಿವರ
ಗ್ರಾಜುಯೇಟ್ ಅಪ್ರೆಂಟಿಸ್‌ಶಿಪ್ 325 ಹುದ್ದೆಗಳಿಗೆ ಅವಕಾಶ ಇದೆ
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್- 143
ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್- 116
ಕಂಪ್ಯೂಟರ್ ಸೈನ್ಸ್ ಆಂಡ್ ಎಂಜಿನಿಯರಿಂಗ್-36
ಇನ್‌ಫಾರ್ಮೆಷನ್ ಸೈನ್ಸ್ ಆಂಡ್ ಎಂಜಿನಿಯರಿಂಗ್-20
ಸಿವಿಲ್ ಎಂಜಿನಿಯರಿಂಗ್-05
ಇನ್‌ಸ್ಟ್ರುಮೆಂಟೇಷನ್ ಟೆಕ್ನಾಲಜಿ ಎಂಜಿನಿಯರಿಂಗ್-5
ಒಟ್ಟು 325 ಅಪ್ರೆಂಟಿಸ್‌ಶಿಪ್ ಹುದ್ದೆಗಳಿವೆ. ಈ ಇದು 1ವರ್ಷಕ್ಕೆ ಮಾತ್ರ ಈ ಹುದ್ದೆಯನ್ನು ಮಿತಿಗೊಳಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9008 ರೂ. ಸ್ಟೈಫೆಂಡ್ ನೀಡಲಾಗುತ್ತದೆ.
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್‌ಶಿಪ್ 75 ಹುದ್ದೆಗಳಿಗೆ ಅವಕಾಶ
ಎಲೆಕ್ಟ್ರಿಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್- 55
ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್-10
ಕಂಪ್ಯೂಟರ್ ಸೈನ್ಸ್ ಆಂಡ್ ಎಂಜಿನಿಯರಿಂಗ್-10
ಸೇರಿದಂತೆ ಒಟ್ಟು 75 ಹುದ್ದೆಗಳಿವೆ. ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಬಿಇ/ಬಿಟೆ ಪದವಿ ಪಡೆದಿರಬೇಕು. ಡಿಪ್ಲೊಮಾ ಅಪ್ರೆಂಟಿಸ್‌ಶಿಪ್‌ಗೆ ಸರಕಾರದ ಅಂಗೀಕೃತ ಪಾಲಿಟೆಕ್ನಿಕ್‌ಗಳಿಂದ ಮೂರು ವರ್ಷದ ಡಿಪ್ಲೊಮಾ ಓದಿರಬೇಕು.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
2020, 2021, 2022ರಲ್ಲಿ ಪದವಿ/ಡಿಪ್ಲೊಮಾ ಪೂರೈಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಅಅಂದರೆ, 2019ರ ನಂತರ ಸಂಬಂಧಪಟ್ಟ ಪದವಿ/ಡಿಪ್ಲೊಮಾ ಉತ್ತೀರ್ಣರಾದವರು ಮಾತ್ರ ಅರ್ಜಿ ಸಲ್ಲಿಸಬಹುದು.
ಹೀಗೆ ಸಲ್ಲಿಸಬಹುದು
ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಅಕ್ಟೋಬರ್ 31ರ ಮೊದಲು ಅರ್ಜಿ ಸಲ್ಲಿಸಬೇಕು. ಅಂದರೆ, ಎನ್‌ಎಟಿಎಸ್ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದೆ. ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್‌ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 7 ಕೊನೆಯ ದಿನಾಂಕವಾಗಿದೆ.
Published On - 4:05 pm, Mon, 17 October 22