
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 13 ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು.
ಬಿಇಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಕಾಂ, ಬಿಬಿಎ, ಪದವಿ ಪೂರ್ಣಗೊಳಿಸಿರಬೇಕು .
ವಯೋಮಿತಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷಗಳು.
ಇದನ್ನೂ ಓದಿ: ಧಾರವಾಡದ ಕೃಷಿ ವಿಜ್ಞಾನ ವಿವಿಯಲ್ಲಿ ನೇಮಕಾತಿ; ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ: ಸೆಂಟರ್ ಫಾರ್ ಲರ್ನಿಂಗ್ ಆ್ಯಂಡ್ ಡೆವಲಪ್‌ಮೆಂಟ್ (CLD), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು-560013.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ