BHEL Haridwar Trade Apprentice Recruitment 2022: ಉತ್ತರಾಖಂಡ್ ರಾಜ್ಯದಲ್ಲಿರುವ ಭಾರತ ಸರ್ಕಾರದ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನ ಸೆಕ್ಟರ್ ವೆಸ್ಟರ್ನ್ ರೀಜನ್ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಹುದ್ದೆಗಳ ಸಂಖ್ಯೆ, ತಿಂಗಳ ವೇತನ, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ವಿವರಗಳು:
ಖಾಲಿ ಹುದ್ದೆಗಳ ಸಂಖ್ಯೆ: 184
ಹುದ್ದೆಯ ಹೆಸರು: ಟ್ರೇಡ್ ಅಪ್ರೆಂಟಿಸ್ ಪೋಸ್ಟ್‌ಗಳು
ಹುದ್ದೆಯ ವಿವರಗಳು:
ಫಿಟ್ಟರ್ ಹುದ್ದೆಗಳು: 65
ಟರ್ನರ್ ಹುದ್ದೆಗಳು: 19
ಮೆಷಿನಿಸ್ಟ್ ಹುದ್ದೆಗಳು: 43
ವೆಲ್ಡರ್ ಹುದ್ದೆಗಳು: 20
ಎಲೆಕ್ಟ್ರಿಷಿಯನ್ ಹುದ್ದೆಗಳು: 26
ಗ್ರಾಫ್ಟ್ಸ್ ಹುದ್ದೆಗಳು: 2
ಎಲೆಕ್ಟ್ರಾನಿಕ್ಸ್ ಹುದ್ದೆಗಳು: 1
ಮೋಟರ್‌ಬೈಕ್ ವಾಹನ ಹುದ್ದೆ: 1
ಕಾರ್ಪೆಂಟರ್ ಹುದ್ದೆ: 1
ಫೌಂಡ್ರಿ ಮೆನ್ ಹುದ್ದೆಗಳು: 6
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 27 ವರ್ಷ ವಯಸ್ಸಿನವರಾಗಿರಬೇಕು.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ ಸಂಬಂಧಿತ ಟ್ರೇಡ್‌ಗಳಲ್ಲಿ ITI ಉತ್ತೀರ್ಣರಾಗಿರಬೇಕು. ಹಾಗೆಯೇ ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅನ್ವಯಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ / ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 21, 2022.
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 28, 2022.
ಲಿಖಿತ ಪರೀಕ್ಷೆಯ ದಿನಾಂಕ: ಆಗಸ್ಟ್ 6, 2022.
ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.