BHEL Recruitment 2025: ಬಿಎಚ್‌ಇಎಲ್ ನೇಮಕಾತಿ; ಸಿಎಂಪಿ ಸ್ಪೆಷಲಿಸ್ಟ್ ಹುದ್ದೆಗೆ ನೇರ ಸಂದರ್ಶನ

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ತಿರುಚಿಯಲ್ಲಿರುವ ತನ್ನ ಘಟಕದಲ್ಲಿ ಕಾಂಟ್ರಾಕ್ಟ್ ಮೆಡಿಕಲ್ ಪ್ರಾಕ್ಟೀಷನರ್ (ಸಿಎಂಪಿ) ತಜ್ಞರ ಹುದ್ದೆಗಳನ್ನು ಭರ್ತಿ ಮಾಡಲು ವಾಕ್-ಇನ್ ಇಂಟರ್ವ್ಯೂ ನಡೆಸುತ್ತಿದೆ. ಎಂಬಿಬಿಎಸ್ ಪದವೀಧರರು ಮತ್ತು 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವರವಾದ ಮಾಹಿತಿಗಾಗಿ ಬಿಎಚ್‌ಇಎಲ್‌ನ ಅಧಿಕೃತ ಅಧಿಸೂಚನೆಯನ್ನು ಓದಿ.

BHEL Recruitment 2025: ಬಿಎಚ್‌ಇಎಲ್ ನೇಮಕಾತಿ; ಸಿಎಂಪಿ ಸ್ಪೆಷಲಿಸ್ಟ್ ಹುದ್ದೆಗೆ ನೇರ ಸಂದರ್ಶನ
Bhel Hiring Cmp Specialists

Updated on: Feb 06, 2025 | 1:00 PM

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಕಾಂಟ್ರಾಕ್ಟ್ ಮೆಡಿಕಲ್ ಪ್ರಾಕ್ಟೀಷನರ್(CMP) ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ತಿರುಚಿರಾಪಳ್ಳಿ – ತಮಿಳುನಾಡು ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20ರಂದು ಬೆಳಿಗ್ಗೆ 09:30 ಕ್ಕೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ಬಿಎಚ್‌ಇಎಲ್ ನೇಮಕಾತಿ ಅರ್ಹತಾ ವಿವರಗಳು:

  • ಶೈಕ್ಷಣಿಕ ಅರ್ಹತೆ: ಬಿಎಚ್‌ಇಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಬಿಬಿಎಸ್ , ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
  • ವಯಸ್ಸಿನ ಮಿತಿ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು45 ವರ್ಷಗಳು.

ಇದನ್ನೂ ಓದಿ: ಬ್ಯಾಂಕ್‌ಗಳಿಂದ ಹಿಡಿದು ನ್ಯಾಯಾಲಯದವರೆಗೆ, ಫೆಬ್ರವರಿಯಲ್ಲಿ ಲಭ್ಯವಿರುವ ಸರ್ಕಾರಿ ಉದ್ಯೋಗಗಳ ಮಾಹಿತಿ ಇಲ್ಲಿದೆ

ಬಿಎಚ್‌ಇಎಲ್ ನೇಮಕಾತಿ (ಸಿಎಂಪಿ ಸ್ಪೆಷಲಿಸ್ಟ್) ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ?

ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಫೆಬ್ರವರಿ 20ರಂದು ಬೆಳಿಗ್ಗೆ 09:30 ಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ಸ್ಥಳ: HR ಕಾನ್ಫರೆನ್ಸ್ ಹಾಲ್, ಆಡಳಿತ ಕಟ್ಟಡ, BHEL, HPBP/ತಿರುಚಿ – 620014

ಬಿಎಚ್‌ಇಎಲ್‌ನ ಅಧಿಕೃತ ಅಧಿಸೂಚನೆ: 02-CMP-Specialist-Posts-Advt-Details-BHEL

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ