BIS Recruitment 2022: ಬಿಐಎಸ್ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
BIS Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BIS ನ ಅಧಿಕೃತ ವೆಬ್ಸೈಟ್ bis.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
BIS Recruitment 2022: ಭಾರತ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BIS ನ ಅಧಿಕೃತ ವೆಬ್ಸೈಟ್ bis.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 15 ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
- ಪ್ರಮಾಣೀಕರಣ ವಿಭಾಗ (Standardization Department) – 4 ಹುದ್ದೆಗಳು
- ಸಂಶೋಧನಾ ವಿಶ್ಲೇಷಣೆ – 20 ಹುದ್ದೆಗಳು
- ನಿರ್ವಹಣಾ ವ್ಯವಸ್ಥೆ ಪ್ರಮಾಣೀಕರಣ ವಿಭಾಗ (MSCD) – 22 ಹುದ್ದೆಗಳು
ಅರ್ಹತಾ ಮಾನದಂಡಗಳು:
- ಪ್ರಮಾಣೀಕರಣ ವಿಭಾಗ- ಬಿ.ಟೆಕ್ ಅಥವಾ ಬಿ.ಇ. ಮಾಡಿರಬೇಕು. ಅಥವಾ ಕನಿಷ್ಠ 2 ವರ್ಷಗಳ ಕೆಲಸದ ಅನುಭವದೊಂದಿಗೆ ಮೆಟಲರ್ಜಿಕಲ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
- ಸಂಶೋಧನಾ ವಿಶ್ಲೇಷಣೆ- ಯಾವುದೇ ವಿಷಯದಲ್ಲಿ ಪದವಿ ಹೊಂದಿದ್ದರೆ ಅರ್ಜಿ ಸಲ್ಲಿಸಬಹುದು.
- ನಿರ್ವಹಣಾ ವ್ಯವಸ್ಥೆ ಪ್ರಮಾಣೀಕರಣ ವಿಭಾಗ (MSCD)- ಯಾವುದೇ ವಿಭಾಗದಲ್ಲಿ ಎಂಎಸ್ಸಿಡಿ ಪದವಿ ಅಥವಾ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಮಾಡಿರಬೇಕು. ಜೊತೆಗೆ ಕನಿಷ್ಠ 3 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
ವಯೋಮಿತಿ: 35 ವರ್ಷದವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 70 ಸಾವಿರ ರೂ. ವೇತನ ಸಿಗಲಿದೆ.
ಪ್ರಮುಖ ದಿನಾಂಕಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 15, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.