AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMC Bank Recruitment 2024: ಬಿಎಂಸಿ ಬ್ಯಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ, ಬಾಂಬೆ ಮರ್ಕೆಂಟೈಲ್ ಕೋ- ಆಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳು ಖಾಲಿಯಿದೆ. ಇದೀಗ ಪ್ರೊಬೇಷನರಿ ಆಫೀಸರ್ (ಪಿಒ)/ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ) ಹುದ್ದೆಗಳು ಸೇರಿದಂತೆ 135 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತಾದ ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

BMC Bank Recruitment 2024: ಬಿಎಂಸಿ ಬ್ಯಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 06, 2024 | 6:13 PM

Share

ಬಾಂಬೆ ಮರ್ಕೆಂಟೈಲ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಪ್ರಮುಖ ಮಲ್ಟಿ ಸ್ಟೇಟ್ ಶೆಡ್ಯೂಲ್ಡ್ ಬ್ಯಾಂಕ್ ಗಳಲ್ಲಿ ಒಂದಾಗಿದೆ. ಹತ್ತು ರಾಜ್ಯಗಳಲ್ಲಿ 52 ಶಾಖೆಗಳನ್ನು ಹೊಂದಿದ್ದು, ಇದೀಗ ಖಾಲಿಯಿರುವ ಪ್ರೊಬೇಷನರಿ ಆಫೀಸರ್ (ಪಿಒ)/ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಡಿಸೆಂಬರ್ 25 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

* ನೇಮಕಾತಿ ಬ್ಯಾಂಕ್ : ಬಾಂಬೆ ಮರ್ಕೆಂಟೈಲ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್.

* ಹುದ್ದೆಗಳು : ಪ್ರೊಬೇಷನರಿ ಆಫೀಸರ್ (ಪಿಒ) ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ).

* ಒಟ್ಟು ಹುದ್ದೆಗಳ ಸಂಖ್ಯೆ : 135 ಹುದ್ದೆಗಳು

ವಿದ್ಯಾರ್ಹತೆ ಹಾಗೂ ವಯೋಮಿತಿ

* ಪ್ರೊಬೇಷನರಿ ಆಫೀಸರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ಪೂರ್ಣಗೊಳಿಸಬೇಕು ಹಾಗೂ ಕಂಪ್ಯೂಟರ್ ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು.

* ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯಸ್ಸು ದಾಟಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮವಿದ್ದು, ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ಸಿ ಹಾಗೂ ಎಸ್‌ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

* ಎಸ್ಎಸ್ಎಲ್‌ಸಿ ಅಂಕಪಟ್ಟಿ

* ಜನ್ಮ ಪ್ರಮಾಣಪತ್ರ

* ಆಧಾರ್ ಕಾರ್ಡ್

* ಪದವಿ ಅಂಕಪಟ್ಟಿ

* ಜಾತಿ ಪ್ರಮಾಣಪತ್ರ

ಆಯ್ಕೆ ಪ್ರಕ್ರಿಯೆ

* ಲಿಖಿತ ಪರೀಕ್ಷೆ

* ಸಂದರ್ಶನ

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-11-2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-12-2024

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು