ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bangalore Metro Rail Corporation Limited -BMRCL) ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ, ಒಟ್ಟು ಹುದ್ದೆಗಳು – 58. ಸಂಬಳ: 32,000 ರೂಪಾಯಿ. ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹುದ್ದೆಗಳ ವಿವರ ಹೀಗಿದೆ:
Bangalore Metro Rail Corporation Limited BMRCL Recruitment 2024
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
ಕೆಲಸದ ಸ್ಥಳ: ಬೆಂಗಳೂರು
ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ
ಸಂಬಳ: 32,000 ರೂ, ಒಟ್ಟು ಹುದ್ದೆಗಳು 58
ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು.
ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ
ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ:
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭
ಅರ್ಜಿ ಪ್ರಕ್ರಿಯೆ ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024
ಈ ಹುದ್ದೆಯ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ: PDF
BMRCL ಸಂಸ್ಥೆಯ ಅಧಿಕೃತ ವೆಬ್ಸೈಟ್ english.bmrc.co.in