BMRCL Recruitment 2022: ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಾವಕಾಶ: 63 ಸಾವಿರ ರೂ. ವೇತನ

BMRCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು 45 ವರ್ಷಕ್ಕಿಂತ ಮೇಲ್ಪಟ್ಟಿರಬಾರದು. ಹಾಗೆಯೇ ವೈದ್ಯಕೀಯ ಆಧಾರದ ಮೇಲೆ ಅಥವಾ ಅಶಿಸ್ತಿನ ಆಧಾರದ ಮೇಲೆ ಬಿಡುಗಡೆಯಾದ ಮಾಜಿ ಮಿಲಿಟರಿ ಸಿಬ್ಬಂದಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

BMRCL Recruitment 2022: ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಾವಕಾಶ: 63 ಸಾವಿರ ರೂ. ವೇತನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 28, 2021 | 5:21 PM

BMRCL Recruitment 2022: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಸ್ಟೇಷನ್ ಕಂಟ್ರೋಲರ್/ಟ್ರೇನ್ ಆಪರೇಟರ್ (SC/TO) ವಿಭಾಗಗಳಲಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10 ಜನವರಿ 2022 ರ ಮೊದಲು bmrc.co.in ನ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಪ್ರಕಾರ, ವ್ಯಕ್ತಿಯ ಕಾರ್ಯಕ್ಷಮತೆಯ ಆಧಾರದ ಮೇಲೆ ಒಪ್ಪಂದದ ಅವಧಿಯನ್ನು ವಿಸ್ತರಿಸಬಹುದು. ಹುದ್ದೆಯ ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ…

ಹುದ್ದೆಯ ಹೆಸರು ಮತ್ತು ಒಟ್ಟು ಹುದ್ದೆಗಳು: ಸ್ಟೇಷನ್ ಕಂಟ್ರೋಲರ್/ಟ್ರೇನ್ ಆಪರೇಟರ್ (SC/TO), ಒಟ್ಟು 50 ಹುದ್ದೆಗಳು ಖಾಲಿ ಇವೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು 45 ವರ್ಷಕ್ಕಿಂತ ಮೇಲ್ಪಟ್ಟಿರಬಾರದು. ಹಾಗೆಯೇ ವೈದ್ಯಕೀಯ ಆಧಾರದ ಮೇಲೆ ಅಥವಾ ಅಶಿಸ್ತಿನ ಆಧಾರದ ಮೇಲೆ ಬಿಡುಗಡೆಯಾದ ಮಾಜಿ ಮಿಲಿಟರಿ ಸಿಬ್ಬಂದಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ವಿದ್ಯಾರ್ಹತೆ: ಸ್ಟೇಷನ್ ಕಂಟ್ರೋಲರ್/ಟ್ರೇನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ ಟೆಲಿಕಮ್ಯುನಿಕೇಷನ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್‌ನಲ್ಲಿ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್​ನಲ್ಲಿ 3 ವರ್ಷಗಳ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33 ಸಾವಿರದಿಂದ 63 ಸಾವಿರದವರೆಗೆ ವೇತನ ನಿಗದಿ ಮಾಡಲಾಗುತ್ತದೆ. ಇದರ ಜೊತೆಗೆ ಇತರೆ ಭತ್ಯೆಗಳನ್ನು ಸಹ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ? ಅರ್ಹ ಅಭ್ಯರ್ಥಿಗಳು bmrc.co.in ನ ಅಧಿಕೃತ ವೆಬ್‌ಸೈಟ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(BMRCL Recruitment 2022: Apply for Station Controller Posts)

Published On - 5:18 pm, Tue, 28 December 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ