BMRCL recruitment 2023: ನಮ್ಮ ಮೆಟ್ರೋ ನೇಮಕಾತಿ: ತಿಂಗಳ ವೇತನ 94 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Mar 25, 2023 | 2:58 PM

BMRCL recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬೆಂಗ​ಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್ bmrc.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

BMRCL recruitment 2023: ನಮ್ಮ ಮೆಟ್ರೋ ನೇಮಕಾತಿ: ತಿಂಗಳ ವೇತನ 94 ಸಾವಿರ ರೂ.
BMRCL recruitment 2023
Follow us on

BMRCL recruitment 2023: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 24 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬೆಂಗ​ಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್ bmrc.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಹಾಕಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ( BMRCL ) ಅಥವಾ ನಮ್ಮ ಮೆಟ್ರೋ
  • ಹುದ್ದೆಗಳ ಸಂಖ್ಯೆ: 236
  • ಉದ್ಯೋಗ ಸ್ಥಳ: ಬೆಂಗಳೂರು , ಕರ್ನಾಟಕ
  • ಹುದ್ದೆಯ ಹೆಸರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್

ಹುದ್ದೆಗಳ ವಿಭಾಗವಾರು ವಿವರಗಳು:

  • ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್- 108 ಹುದ್ದೆಗಳು
  • ಸೆಕ್ಷನ್ ಇಂಜಿನಿಯರ್- 14 ಹುದ್ದೆಗಳು
  • ನಿರ್ವಾಹಕ- 114

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆ:

BMRCL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITI, ಡಿಪ್ಲೊಮಾ, BE/B ಟೆಕ್ ಇಂಜಿನಿಯರಿಂಗ್ ಅನ್ನು ಪೂರ್ಣಗೊಳಿಸಿರಬೇಕು .

ತಿಂಗಳ ವೇತನ:

  • ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್- 35000 ರಿಂದ 82660/- ರೂ.
  • ಸೆಕ್ಷನ್ ಇಂಜಿನಿಯರ್- 40000 ರಿಂದ 94500/- ರೂ.
  • ನಿರ್ವಾಹಕ- 25000 ರಿಂದ 59060/- ರೂ.

ವಯೋಮಿತಿ:

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿ ವಯಸ್ಸು ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ:

  • 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷಗಳು
  • SC, ST ಅಭ್ಯರ್ಥಿಗಳಿಗೆ: 5 ವರ್ಷಗಳು

ಅರ್ಜಿ ಶುಲ್ಕ:

  • ಸಾಮಾನ್ಯ, 2A, 2B, 3A, 3B ಅಭ್ಯರ್ಥಿಗಳಿಗೆ: 1180 + 18% GST
  • SC/ST ಅಭ್ಯರ್ಥಿಗಳಿಗೆ: 590+ 18% GST

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ- 24-03-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 24-ಏಪ್ರಿಲ್-2023

ಈ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕ್‌ಗಳು: