BMTC Recruitment 2023: ಬಿಎಂಟಿಸಿಯ 636 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

BMTC Recruitment 2023: ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 30 ವರ್ಷದೊಳಗಿರಬೇಕು.

BMTC Recruitment 2023: ಬಿಎಂಟಿಸಿಯ 636 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
BMTC Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 25, 2023 | 2:35 PM

BMTC Recruitment 2023: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ( BMTC ) 636 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ಮೂರು ವಿಭಾಗಗಳಲ್ಲಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಮೂಲಕ ಅರ್ಜಿಗಳನ್ನು ಅನ್ವಯಿಸಬಹುದು. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು, ಎಷ್ಟು ವೇತನ ಸಿಗಲಿದೆ, ಅರ್ಜಿ ನಮೂನೆಯನ್ನು ಎಲ್ಲಿ ಡೌನ್​ಲೋಡ್ ಮಾಡಿಕೊಳ್ಳುವುದು ಎಂಬುದರ ಸಂಪೂರ್ಣ  ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( BMTC )
  • ಹುದ್ದೆಗಳ ಸಂಖ್ಯೆ: 636
  • ಉದ್ಯೋಗ ಸ್ಥಳ: ಬೆಂಗಳೂರು

ಹುದ್ದೆಗಳ ಹೆಸರು:

  • ಪೂರ್ಣ ಪ್ರಮಾಣದ ಅಪ್ರೆಂಟಿಸ್‌ಗಳು- 550 ಹುದ್ದೆಗಳು
  • ಡಿಪ್ಲೊಮಾ ಅಪ್ರೆಂಟಿಸ್‌ಗಳು- 43 ಹುದ್ದೆಗಳು
  • ಪದವೀಧರ ಅಪ್ರೆಂಟಿಸ್‌ಗಳು- 43 ಹುದ್ದೆಗಳು

ಅರ್ಹತಾ ಮಾನದಂಡಗಳು:

  • ಪೂರ್ಣ ಪ್ರಮಾಣದ ಅಪ್ರೆಂಟಿಸ್‌ಗಳು- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪಾಸಾಗಿರಬೇಕು. ಹಾಗೆಯೇ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು.
  • ಡಿಪ್ಲೊಮಾ ಅಪ್ರೆಂಟಿಸ್‌ಗಳು- ಡಿಪ್ಲೊಮಾ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಪದವೀಧರ ಅಪ್ರೆಂಟಿಸ್‌ಗಳು- ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:

ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 30 ವರ್ಷದೊಳಗಿರಬೇಕು. ಹಾಗೆಯೇ ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಮಾಸಿಕ ವೇತನ:

  • ಪೂರ್ಣ ಪ್ರಮಾಣದ ಅಪ್ರೆಂಟಿಸ್‌ಗಳು- ರೂ.6000 ರಿಂದ 7000/-
  • ಡಿಪ್ಲೊಮಾ ಅಪ್ರೆಂಟಿಸ್‌ಗಳು- ರೂ.8000/-
  • ಪದವೀಧರ ಅಪ್ರೆಂಟಿಸ್‌ಗಳು- ರೂ.9000/-

ಪ್ರಮುಖ ದಿನಾಂಕ:

ಅರ್ಜಿ ಕಳುಹಿಸಲು ಕೊನೆಯ ದಿನಾಂಕ- ಮಾರ್ಚ್ 15, 2023

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಂದರೆ ಅಂಚೆ ಇಲಾಖೆ ಅಥವಾ ಇನ್ನಿತರ ಆಯ್ಕೆಯ ಮೂಲಕ ಅರ್ಜಿಗಳನ್ನು ಕಳುಹಿಸಬಹುದು.

ಅರ್ಜಿಗಳನ್ನು ಕಳುಹಿಸಬೇಕಾದ ವಿಳಾಸ:

Bangalore Metropolitan Transport Corporation, Annexe Building, Administration Department, 5th Floor, Beside Shanthinagar Bus Stand, Bengaluru – 560027

ಅರ್ಜಿ ನಮೂನೆ ಎಲ್ಲಿ ಸಿಗುತ್ತದೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಲು ಬಯಸುತ್ತಿದ್ದರೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಮೇಲಿನ ಅಭಿಮಾನ ಹೆಚ್ಚಾಗಿದೆಯೇ ಹೊರತು ಕಮ್ಮಿಯಾಗಿಲ್ಲ: ಅಭಿಮಾನಿ
ದರ್ಶನ್ ಮೇಲಿನ ಅಭಿಮಾನ ಹೆಚ್ಚಾಗಿದೆಯೇ ಹೊರತು ಕಮ್ಮಿಯಾಗಿಲ್ಲ: ಅಭಿಮಾನಿ
ಶ್ರೀಲಂಕಾ ಅಧ್ಯಕ್ಷರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶ್ರೀಲಂಕಾ ಅಧ್ಯಕ್ಷರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ವೇತನ ನೀಡದಿದ್ದಕ್ಕೆ ಬ್ಯಾನರ್ ಕಂಬ ಏರಿದ ಕಾರ್ಮಿಕ
ವೇತನ ನೀಡದಿದ್ದಕ್ಕೆ ಬ್ಯಾನರ್ ಕಂಬ ಏರಿದ ಕಾರ್ಮಿಕ
ರೇಣುಕಾಸ್ವಾಮಿ ಹತ್ಯೆ ಕೇಸ್​; ದರ್ಶನ್ ವಿಚಾರಣೆಯ ನೇರ ಪ್ರಸಾರ ಇಲ್ಲಿದೆ..
ರೇಣುಕಾಸ್ವಾಮಿ ಹತ್ಯೆ ಕೇಸ್​; ದರ್ಶನ್ ವಿಚಾರಣೆಯ ನೇರ ಪ್ರಸಾರ ಇಲ್ಲಿದೆ..
ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದ ಪ್ರತಿಭಟನೆಕಾರರು
ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದ ಪ್ರತಿಭಟನೆಕಾರರು
Video: ಸಂಸತ್ತಿಗೆ ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ
Video: ಸಂಸತ್ತಿಗೆ ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ
ಸಿದ್ದರಾಮಯ್ಯನವರ ಗೊಡ್ಡು ಬೆದರಿಕೆಗಳಿಗೆ ಹೆದರಲ್ಲ, ಬಗ್ಗಲ್ಲ: ವಿಜಯೇಂದ್ರ
ಸಿದ್ದರಾಮಯ್ಯನವರ ಗೊಡ್ಡು ಬೆದರಿಕೆಗಳಿಗೆ ಹೆದರಲ್ಲ, ಬಗ್ಗಲ್ಲ: ವಿಜಯೇಂದ್ರ
ವಿಜಯೇಂದ್ರ-ಭೈರೇಗೌಡ ನಡುವೆ ವಾಗ್ವಾದ, ಸ್ಪೀಕರ್ ಯುಟಿ ಖಾದರ್ ಅಸಹಾಯಕ
ವಿಜಯೇಂದ್ರ-ಭೈರೇಗೌಡ ನಡುವೆ ವಾಗ್ವಾದ, ಸ್ಪೀಕರ್ ಯುಟಿ ಖಾದರ್ ಅಸಹಾಯಕ
ಅಧಿಕಾರದಲ್ಲಿರೋದು ಮುಸ್ಲಿಂ ಓಲೈಕೆಯ ಹಿಂದೂ ವಿರೋಧಿ ಸರ್ಕಾರ: ಯತ್ನಾಳ್
ಅಧಿಕಾರದಲ್ಲಿರೋದು ಮುಸ್ಲಿಂ ಓಲೈಕೆಯ ಹಿಂದೂ ವಿರೋಧಿ ಸರ್ಕಾರ: ಯತ್ನಾಳ್
150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಜಯೇಂದ್ರ ಆಗ್ರಹ
150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಜಯೇಂದ್ರ ಆಗ್ರಹ