
ಬಿರ್ಸಾ ಮುಂಡಾ ಬುಡಕಟ್ಟು ವಿಶ್ವವಿದ್ಯಾಲಯ (BMTU) ವಿವಿಧ ವಿಷಯಗಳಲ್ಲಿ ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಜನವರಿ 17 ರಿಂದ ಪ್ರಾರಂಭವಾಗಿದ್ದು,ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 07 ರ ಒಳಗೆ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು.
ವಿಶ್ವವಿದ್ಯಾನಿಲಯವು ಕಂಪ್ಯೂಟರ್ ಸೈನ್ಸ್, ಇಂಗ್ಲಿಷ್, ಅರ್ಥಶಾಸ್ತ್ರ, ರಸಾಯನಶಾಸ್ತ್ರ, ಕಾನೂನು, ಸಮಾಜ ಕಾರ್ಯ ಸೇರಿದಂತೆ ವಿವಿಧ ವಿಷಯಗಳಿಗೆ ಒಟ್ಟು 20 ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ 4 ಪ್ರೊಫೆಸರ್ ಹುದ್ದೆಗಳು, 6 ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳು ಮತ್ತು ಒಟ್ಟು 10 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಸೇರಿವೆ.
ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಶೇ.55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಅಲ್ಲದೆ ಪಿಎಚ್‌ಡಿ ಪದವಿ ಪಡೆದಿರಬೇಕು. ಆದರೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿದಾರರು ಸಂಬಂಧಪಟ್ಟ ವಿಷಯದಲ್ಲಿ ಶೇಕಡಾ 55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಅಭ್ಯರ್ಥಿಯು ಯುಜಿಸಿ ಅಥವಾ ಸಿಎಸ್‌ಐಆರ್ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ಕೆನರಾ ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ
ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 1000 ರೂ., ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ವರ್ಗಗಳಿಗೆ ಅರ್ಜಿದಾರರು 500 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೋಡ್‌ನಲ್ಲಿ ಪಾವತಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿದಾರರನ್ನು ಲಿಖಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಮತ್ತು ಲಿಖಿತ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ