BOB Capital Markets: 103 ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ಪದವೀಧರರಿಗೆ ಸುವರ್ಣವಕಾಶ

BOB ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್, 103 ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪದವಿ ಪೂರ್ಣಗೊಳಿಸಿದ ಮತ್ತು ಬಂಡವಾಳ ಮಾರುಕಟ್ಟೆಯಲ್ಲಿ ಕನಿಷ್ಠ 6 ತಿಂಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 31 ಕೊನೆಯ ದಿನಾಂಕ. ಬ್ಯಾಂಕಿಂಗ್ ಮತ್ತು ಬಂಡವಾಳ ಮಾರುಕಟ್ಟೆ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇದೊಂದು ಉತ್ತಮ ಅವಕಾಶ.

BOB Capital Markets: 103 ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ಪದವೀಧರರಿಗೆ ಸುವರ್ಣವಕಾಶ
ಮ್ಯಾನೇಜರ್ ಹುದ್ದೆಗೆ ನೇಮಕಾತಿ

Updated on: Mar 18, 2026 | 12:22 PM

ಬ್ಯಾಂಕ್ ಆಫ್ ಬರೋಡಾದ ಅಂಗಸಂಸ್ಥೆಯಾದ ‘ಬಿಒಬಿ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್’ (BOB Capital Markets Ltd), ದೇಶಾದ್ಯಂತ ಖಾಲಿ ಇರುವ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 103 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಮತ್ತು ಬಂಡವಾಳ ಮಾರುಕಟ್ಟೆ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯಡಿ ಉತ್ತರ ವಲಯಕ್ಕೆ 37, ಪಶ್ಚಿಮ ವಲಯಕ್ಕೆ 44 ಹಾಗೂ ದಕ್ಷಿಣ ಮತ್ತು ಪೂರ್ವ ವಲಯಗಳಿಗೆ ಒಟ್ಟು 22 ಹುದ್ದೆಗಳನ್ನು ಮೀಸಲಿಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಶಿಕ್ಷಣವನ್ನು ಪೂರೈಸಿರಬೇಕು. ಶೈಕ್ಷಣಿಕ ಅರ್ಹತೆಯ ಜೊತೆಗೆ ಬಂಡವಾಳ ಮಾರುಕಟ್ಟೆಯಲ್ಲಿ ಕನಿಷ್ಠ 6 ತಿಂಗಳ ಕೆಲಸದ ಅನುಭವವಿರುವುದು ಕಡ್ಡಾಯವಾಗಿದೆ. ಅದರಲ್ಲೂ ವಿಶೇಷವಾಗಿ ಡಿಮ್ಯಾಟ್ ಖಾತೆ ನಿರ್ವಹಣೆ, ಟ್ರೇಡಿಂಗ್ ಅಕೌಂಟ್, ಮತ್ತು ಸೇಲ್ಸ್ ಬ್ರೋಕಿಂಗ್ ವಿಭಾಗದಲ್ಲಿ ಪರಿಣತಿ ಹೊಂದಿರುವವರಿಗೆ ಆಯ್ಕೆಯಲ್ಲಿ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಉತ್ತಮ ಸಂವಹನ ಕೌಶಲ್ಯ, ಮಾರ್ಕೆಟಿಂಗ್ ಜ್ಞಾನ ಮತ್ತು ಗ್ರಾಹಕರೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳುವ ಕೌಶಲ್ಯವನ್ನು ಹೊಂದಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್, ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಕೇರಳ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳ ವಿವಿಧ ಶಾಖೆಗಳಲ್ಲಿ ಪೂರ್ಣ ಅವಧಿಯ ಕೆಲಸ ನಿರ್ವಹಿಸಬೇಕಾಗುತ್ತದೆ. ಆಸಕ್ತರು ತಮ್ಮ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ತಮ್ಮ ವಿವರವಾದ ರೆಸ್ಯೂಮೆಯನ್ನು careers@bobcaps.in ಇಮೇಲ್ ವಿಳಾಸಕ್ಕೆ ಕಳುಹಿಸಬೇಕು. ಇಮೇಲ್ ಕಳುಹಿಸುವಾಗ ಸಬ್ಜೆಕ್ಟ್ ಲೈನ್‌ನಲ್ಲಿ “Application for Business Development Manager (Off-Role)” ಎಂದು ನಮೂದಿಸುವುದು ಕಡ್ಡಾಯವಾಗಿದೆ.

ನೇಮಕಾತಿಯ ಬಗೆಗಿನ ಹೆಚ್ಚಿನ ವಿವರ ಹಾಗೂ  ಅಧಿಸೂಚನೆಯನ್ನು ಓದಲು ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡಿ: bobcaps.in/careers#jobopenings

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Wed, 18 March 26

Follow Us