AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPCL Recruitment 2026: ಭಾರತ್ ಪೆಟ್ರೋಲಿಯಂನಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ; 1.40 ಲಕ್ಷ ರೂ. ವರೆಗೆ ವೇತನ!

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ದೇಶಾದ್ಯಂತ 250 ಜೂನಿಯರ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಎಂಜಿನಿಯರಿಂಗ್, ಅಕೌಂಟ್ಸ್, QA ವಿಭಾಗಗಳಲ್ಲಿ ಹುದ್ದೆಗಳಿಗೆ ಮೇ 17 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿವರವಾದ ಮಾಹಿತಿ, ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನಕ್ಕಾಗಿ ಅಧಿಸೂಚನೆ ಪರಿಶೀಲಿಸಿ.

BPCL Recruitment 2026: ಭಾರತ್ ಪೆಟ್ರೋಲಿಯಂನಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ; 1.40 ಲಕ್ಷ ರೂ. ವರೆಗೆ ವೇತನ!
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್
ಅಕ್ಷತಾ ವರ್ಕಾಡಿ
|

Updated on: Apr 24, 2026 | 12:26 PM

Share

ದೇಶದ ಪ್ರಮುಖ ತೈಲ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ದೇಶಾದ್ಯಂತ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 250 ಜೂನಿಯರ್ ಎಕ್ಸಿಕ್ಯೂಟಿವ್ ಮತ್ತು ಇತರ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹುದ್ದೆಗಳ ವಿವರ (Vacancy Details):

ಒಟ್ಟು 250 ಹುದ್ದೆಗಳನ್ನು ಈ ಕೆಳಗಿನಂತೆ ವಿಂಗಡಿಸಲಾಗಿದೆ:

  • ಜೂನಿಯರ್ ಎಕ್ಸಿಕ್ಯುಟಿವ್ (ಎಂಜಿನಿಯರಿಂಗ್): 175
  • ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಕ್ವಾಲಿಟಿ ಅಶ್ಯೂರೆನ್ಸ್): 30
  • ಜೂನಿಯರ್ ಎಕ್ಸಿಕ್ಯುಟಿವ್ (ಅಕೌಂಟ್ಸ್): 25
  • ಜೂನಿಯರ್ ಎಕ್ಸಿಕ್ಯೂಟಿವ್ (ವೇಸೈಡ್ ಸೌಕರ್ಯಗಳು): 10
  • ಕಾರ್ಯದರ್ಶಿ (Secretary): 08
  • ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಅಧಿಕೃತ ಭಾಷೆ): 02

ಶೈಕ್ಷಣಿಕ ಅರ್ಹತೆ ಮತ್ತು ಅನುಭವ:

ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು:

  • ಡಿಪ್ಲೊಮಾ, ಬಿ.ಇ/ಬಿ.ಟೆಕ್ (ಎಂಜಿನಿಯರಿಂಗ್ ವಿಭಾಗಗಳಿಗೆ)
  • ಸಿಎ (CA) / ಸಿಎಂಎ (CMA) (ಅಕೌಂಟ್ಸ್ ವಿಭಾಗಕ್ಕೆ)
  • ಎಂ.ಎ / ಎಂ.ಎಸ್ಸಿ (ಇತರ ವಿಭಾಗಗಳಿಗೆ)

ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಆಯಾ ಕ್ಷೇತ್ರದಲ್ಲಿ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ ಮತ್ತು ವೇತನ:

  • ವಯೋಮಿತಿ: ಏಪ್ರಿಲ್ 1, 2026 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯಸ್ಸು 30 ರಿಂದ 35 ವರ್ಷಗಳ ಒಳಗಿರಬೇಕು (ಮೀಸಲಾತಿ ಅನ್ವಯ ಸಡಿಲಿಕೆ ಇರಲಿದೆ).
  • ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಯ ಆಧಾರದ ಮೇಲೆ ತಿಂಗಳಿಗೆ 30,000 ರಿಂದ 1,40,000ರೂ. ವರೆಗೆ ಆಕರ್ಷಕ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ/OBC/EWS ಅಭ್ಯರ್ಥಿಗಳು: 1180ರೂ.
  • SC/ST/PwBD ಅಭ್ಯರ್ಥಿಗಳು: ಯಾವುದೇ ಶುಲ್ಕವಿಲ್ಲ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೂರು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ:

  • ಲಿಖಿತ ಪರೀಕ್ಷೆ (Written Test)
  • ಗುಂಪು ಚರ್ಚೆ (Group Discussion)
  • ವೈಯಕ್ತಿಕ ಸಂದರ್ಶನ (Personal Interview)

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 17, 2026

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ಬಿಪಿಸಿಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಪೂರ್ಣವಾಗಿ ಓದಿಕೊಳ್ಳಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ