BPNL Recruitment 2024 : ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ,

ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಅರಸುತ್ತಿರುವವರು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಹುದ್ದೆಗಳ ಹೆಸರು, ವೇತನ ಶ್ರೇಣಿ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಕುರಿತಾದ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಸಂಪೂರ್ಣವಾಗಿ ಪರಿಶೀಲಿಸಿ ಆ ಬಳಿಕ ಅರ್ಜಿ ಸಲ್ಲಿಸಬಹುದು.

BPNL Recruitment 2024 : ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ,
ಉದ್ಯೋಗ ಮಾಹಿತಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 21, 2024 | 12:31 PM

ಎಸ್ ಎಸ್ ಎಲ್ ಸಿ ಹಾಗೂ ಪದವಿ ಪೂರ್ಣಗೊಳಿಸಿದ್ದು ಉದ್ಯೋಗದ ಹುಡುಕಾಟದಲ್ಲಿದ್ದವರಿಗೆ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಉದ್ಯೋಗವಕಾಶಗಳು ಲಭ್ಯವಿದೆ. ಒಟ್ಟು 2,248 ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ನವೆಂಬರ್ ತಿಂಗಳ 25 ರೊಳಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

* ಇಲಾಖೆ ಹೆಸರು: ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್

* ಸಣ್ಣ ಉದ್ಯಮ ವಿಸ್ತರಣಾ ಅಧಿಕಾರಿ : 562

* ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ : 1,686

* ಹುದ್ದೆಗಳ ಸಂಖ್ಯೆ : 2,248

* ಉದ್ಯೋಗ ಸ್ಥಳ : ದೇಶಾದ್ಯಂತ

ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ

* ಸಣ್ಣ ಉದ್ಯಮ ವಿಸ್ತರಣಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.

* ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗೆ ಎಸ್ ಎಸ್ ಎಲ್ ಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿರಬೇಕು. * ಸಣ್ಣ ಉದ್ಯಮ ವಿಸ್ತರಣಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ಹಾಗೂ ಗರಿಷ್ಠ ವಯಸ್ಸು 45 ವರ್ಷ ಮೀರಿರಬಾರದು.

ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 40 ವರ್ಷ ದಾಟಿರಬಾರದು.

ಆಯ್ಕೆ ಪ್ರಕ್ರಿಯೆ ಹಾಗೂ ವೇತನ ಶ್ರೇಣಿ

* ಸಣ್ಣ ಉದ್ಯಮ ವಿಸ್ತರಣಾ ಅಧಿಕಾರಿ ಹಾಗೂ ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

* ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,500-40,000/- ರೂ ನೀಡಲಾಗುತ್ತದೆ.

ಇದನ್ನೂ ಓದಿ: ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಪ್ರಮುಖ ದಿನಾಂಕಗಳು :

* ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 09ನೇನವೆಂಬರ್ 2024.

* ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 25ನೇ ನವೆಂಬರ್ 2024.

ಈ ಮೇಲ್ಕಂಡ ಹುದ್ದೆಗಳಿಗೆ ಸಂಬಂಧ ಪಟ್ಟಂತೆ ಹೆಚ್ಚಿನ ಮಾಹಿತಿಗಾಗಿ bharatiyapashupalan.com ಈ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ