BRO Recruitment 2022: ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ನೇಮಕಾತಿ: ವೇತನ 56 ಸಾವಿರ ರೂ.
BRO Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ನ ಅಧಿಕೃತ ವೆಬ್‌ಸೈಟ್ bro.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.
BRO Recruitment 2022: ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಮಲ್ಟಿ ಸ್ಕಿಲ್ಡ್ ವರ್ಕರ್ ಮತ್ತು ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ನ ಅಧಿಕೃತ ವೆಬ್‌ಸೈಟ್ bro.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳು- 1178
ಇದರಲ್ಲಿ 147 ಮೇಸನ್‌ಗಳು, 155 ನರ್ಸಿಂಗ್ ಸಹಾಯಕರು ಮತ್ತು 499 ಡ್ರೈವರ್ ಇಂಜಿನ್ ಸ್ಟ್ಯಾಟಿಕ್ ಹುದ್ದೆಗಳನ್ನು ಮಲ್ಟಿ ಸ್ಕಿಲ್ಡ್ ವರ್ಕರ್ ಪಟ್ಟಿಯಲ್ಲಿ ಸೇರಿಸಲಾಗಿದೆ. ಹಾಗೆಯೇ 377 ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳಿವೆ.
ವಿದ್ಯಾರ್ಹತೆ:
-10ನೇ ತರಗತಿ ಉತ್ತೀರ್ಣರಾಗಿ ಐಟಿಐ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಡ್ರೈವರ್ ಎಂಜಿನ್ ಸ್ಟ್ಯಾಟಿಕ್ ಮತ್ತು ಮೇಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
-ನರ್ಸಿಂಗ್ ಸಹಾಯಕ ಹುದ್ದೆಗಳಿಗೆ, ನರ್ಸಿಂಗ್ ಮಿಡ್‌ವೈಫರಿ ಪ್ರಮಾಣಪತ್ರದೊಂದಿಗೆ 12 ನೇ ತೇರ್ಗಡೆಯಾಗಿರಬೇಕು. ಅಥವಾ ಫಾರ್ಮಸಿಯಲ್ಲಿ ಪ್ರಮಾಣಪತ್ರ ಹೊಂದಿರಬೇಕು.
-12 ನೇ ಪಾಸ್ ಆದವರು ಮತ್ತು ಸ್ಟೋರ್ ಕೀಪರ್ ಬಗ್ಗೆ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಸ್ಟೋರ್ ಕೀಪರ್ ಟೆಕ್ನಿಕಲ್‌ಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
18 ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆದರೆ, ಮಲ್ಟಿ ಸ್ಕಿಲ್ಡ್ ವರ್ಕರ್ ಹುದ್ದೆಗಳಿಗೆ 25 ವರ್ಷಗಳವರೆಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 18 ರಿಂದ 56 ಸಾವಿರದವರೆಗೆ ವೇತನ ಸಿಗಲಿದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 22, 2022
ಆಯ್ಕೆ ಪ್ರಕ್ರಿಯೆ:
-ಲಿಖಿತ ಪರೀಕ್ಷೆ -ದೈಹಿಕ ದಕ್ಷತೆಯ ಪರೀಕ್ಷೆ -ಪ್ರಾಯೋಗಿಕ ಪರೀಕ್ಷೆ (ವ್ಯಾಪಾರ ಪರೀಕ್ಷೆ) -ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗಳ (PME) ಆಧಾರದ ಮೇಲೆ ನೇಮಕಾತಿ ನಡೆಯಲಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.