BRO Recruitment 2022: 876 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸುವುದು ಹೇಗೆಂದು ತಿಳಿಯಿರಿ
BRO Recruitment 2022: ರೋಡ್ ಬಾರ್ಡರ್ ಆರ್ಗನೈಸೇಶನ್ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಈ ಹುದ್ದೆಗಳಿಗೆ ಭಾರತೀಯ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
BRO Recruitment 2022: ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್ (GREF) ರೋಡ್ ಬಾರ್ಡರ್ ಆರ್ಗನೈಸೇಶನ್ (BR0) ಅಡಿಯಲ್ಲಿ ಸ್ಟೋರ್ ಕೀಪರ್ ಟೆಕ್ನಿಕಲ್ ಮತ್ತು ಮಲ್ಟಿ ಸ್ಕಿಲ್ಡ್ ವರ್ಕರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಕುರಿತಾದ ಕಿರು ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಶೀಘ್ರದಲ್ಲೇ ವಿವರವಾದ ಅಧಿಸೂಚನೆಯನ್ನು BRO ನ ಅಧಿಕೃತ ವೆಬ್‌ಸೈಟ್ bro.gov.in ನಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ.
ಪ್ರಸ್ತುತ ಅಧಿಸೂಚನೆಯ ಪ್ರಕಾರ, ಒಟ್ಟು 876 ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಇದರಲ್ಲಿ 377 ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳಿದ್ದರೆ, 499 ಮಲ್ಟಿ ಸ್ಕಿಲ್ಡ್ ವರ್ಕರ್ ಹುದ್ದೆಗಳಿವೆ. ಈ ಮೂಲಕ ಒಂದೇ ನೇಮಕಾತಿ ಪ್ರಕ್ರಿಯೆ ಅಡಿಯಲ್ಲಿ ಎಂಟು ನೂರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ರೋಡ್ ಬಾರ್ಡರ್ ಆರ್ಗನೈಸೇಶನ್ ಮುಂದಾಗಿದೆ.
ರೋಡ್ ಬಾರ್ಡರ್ ಆರ್ಗನೈಸೇಶನ್ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಈ ಹುದ್ದೆಗಳಿಗೆ ಭಾರತೀಯ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಆನ್ಲೈನ್ನಲ್ಲೇ ನಡೆಯಲಿದ್ದು, ಅದರಂತೆ ಆಸಕ್ತರು ನೋಟಿಫಿಕೇಶನ್ ಬಿಡುಗಡೆಯ ಬಳಿಕ bro.gov.in ಗೆ ಭೇಟಿ ನೀಡಿ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಪ್ರಸ್ತುತ ನೇಮಕಾತಿಗಾಗಿ ಬಿಡುಗಡೆ ಮಾಡಲಾದ ಪರಿಷ್ಕೃತ ಮಾಹಿತಿಯನ್ನು ಪರಿಶೀಲಿಸಬಹುದು. ಯಾರ ನೇರ ಲಿಂಕ್ ಅನ್ನು ಕೆಳಗೆ ಹಂಚಿಕೊಳ್ಳಲಾಗಿದೆ.
BRO Recruitment 2022 ನೇಮಕಾತಿಯ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.