Job Alert: ಗಡಿ ಭದ್ರತಾ ಪಡೆಯಲ್ಲಿ 2,788 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ವೇತನ ಸೇರಿದಂತೆ ಇತರ ಮಾಹಿತಿ ಇಲ್ಲಿದೆ

BSF Constable Tradesman Recruitment 2022: ಗಡಿ ಭದ್ರತಾ ಪಡೆಯಲ್ಲಿ ಒಟ್ಟು 2788 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವೇತನ ಶ್ರೇಣಿ ₹ 21,700 ರಿಂದ ₹ 69,100 ಇದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

Job Alert: ಗಡಿ ಭದ್ರತಾ ಪಡೆಯಲ್ಲಿ 2,788 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ವೇತನ ಸೇರಿದಂತೆ ಇತರ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on:Jan 16, 2022 | 1:24 PM

ಗಡಿ ಭದ್ರತಾ ಪಡೆ- ಬಿಎಸ್ಎಫ್  (BSF)ಕಾನ್ಸ್ಟೇಬಲ್ ಹುದ್ದೆಗಳಿಗೆ (Constable Tradesman) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು BSFನ ಅಧಿಕೃತ ಸೈಟ್ bsf.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಜಾಹೀರಾತು ಪ್ರಕಟವಾದ ದಿನಾಂಕದಿಂದ 45 ದಿನಗಳ ಒಳಗೆ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 2788 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ವೇತನ ಶ್ರೇಣಿ ₹ 21,700- ₹ 69,100/- ಆಗಿದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳು ಇಲ್ಲಿವೆ.

ಹುದ್ದೆಯ ವಿವರಗಳು:

ಪುರುಷ: 2651 ಪೋಸ್ಟ್‌ಗಳು

ಸ್ತ್ರೀ: 137 ಪೋಸ್ಟ್‌ಗಳು

ಅರ್ಹತೆಯ ಮಾನದಂಡ: ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ತತ್ಸಮಾನವನ್ನು ಉತ್ತೀರ್ಣರಾಗಿರಬೇಕು ಜತೆಗೆ ಆಯಾ ವಿಭಾಗದಲ್ಲಿ ಎರಡು ವರ್ಷದ ಅನುಭವ ಹೊಂದಿರಬೇಕು. ಅಥವಾ ವೃತ್ತಿಪರ ಸಂಸ್ಥೆಯ ಕೈಗಾರಿಕಾ ತರಬೇತಿಯಿಂದ ಒಂದು ವರ್ಷದ ಪ್ರಮಾಣಪತ್ರ ಮತ್ತು ಆಯಾ ವಿಭಾಗದಲ್ಲಿ ಒಂದು ವರ್ಷದ ಅನುಭವ ಹೊಂದಿರಬೇಕು. ಅಥವಾ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಎರಡು ವರ್ಷದ ಡಿಪ್ಲೋಮಾವನ್ನು ಆಯಾ ವಿಭಾಗಕ್ಕೆ ಸಂಬಂಧಪಟ್ಟಂತೆ ಪಡೆದಿರಬೇಕು.

ಅಭ್ಯರ್ಥಿಗಳ ವಯೋಮಿತಿಯು 2021ರ ಆಗಸ್ಟ್ 1ಕ್ಕೆ ಅನುಗುಣವಾಗಿ- 18ರಿಂದ 23ರ ನಡುವೆ ಇರಬೇಕು. ಅಭ್ಯರ್ಥಿಗಳನ್ನು ದೈಹಿಕ ಗುಣಮಟ್ಟ ಪರೀಕ್ಷೆ (PST), ದೈಹಿಕ ದಕ್ಷತೆ ಪರೀಕ್ಷೆ (PET), ದಾಖಲೆ ಪರಿಶೀಲನೆ, ಟ್ರೇಡ್ ಟೆಸ್ಟ್, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಬಿಎಸ್​ಎಫ್ ವೆಬ್ ಸೈಟ್ bsf.gov.inಪರಿಶೀಲಿಸಬಹುದು.

ನೇರವಾಗಿ ಮೇಲೆ ತಿಳಿಸಲಾದ ಹುದ್ದೆಗಳ ಕುರಿತು ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:

UPSC Recruitment 2022: ವಿವಿಧ ಇಲಾಖೆಗಳ ಒಟ್ಟು 78 ಹುದ್ದೆಗಳಿಗೆ ಯುಪಿಎಸ್​ಸಿಯಿಂದ ಅರ್ಜಿ ಆಹ್ವಾನ; ಅಪ್ಲಿಕೇಶನ್ ಸಲ್ಲಿಸುವ ವಿಧಾನ ಇಲ್ಲಿದೆ

Ayush Department yoga trainer: ಆಯುಷ್ ಇಲಾಖೆಯಲ್ಲಿ ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನ

Published On - 1:18 pm, Sun, 16 January 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ