ಗಡಿ ಭದ್ರತಾ ಪಡೆ- ಬಿಎಸ್ಎಫ್ (BSF)ಕಾನ್ಸ್ಟೇಬಲ್ ಹುದ್ದೆಗಳಿಗೆ (Constable Tradesman) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು BSFನ ಅಧಿಕೃತ ಸೈಟ್ bsf.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಜಾಹೀರಾತು ಪ್ರಕಟವಾದ ದಿನಾಂಕದಿಂದ 45 ದಿನಗಳ ಒಳಗೆ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 2788 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ವೇತನ ಶ್ರೇಣಿ ₹ 21,700- ₹ 69,100/- ಆಗಿದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳು ಇಲ್ಲಿವೆ.
ಹುದ್ದೆಯ ವಿವರಗಳು:
ಪುರುಷ: 2651 ಪೋಸ್ಟ್ಗಳು
ಸ್ತ್ರೀ: 137 ಪೋಸ್ಟ್ಗಳು
ಅರ್ಹತೆಯ ಮಾನದಂಡ:
ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ತತ್ಸಮಾನವನ್ನು ಉತ್ತೀರ್ಣರಾಗಿರಬೇಕು ಜತೆಗೆ ಆಯಾ ವಿಭಾಗದಲ್ಲಿ ಎರಡು ವರ್ಷದ ಅನುಭವ ಹೊಂದಿರಬೇಕು. ಅಥವಾ ವೃತ್ತಿಪರ ಸಂಸ್ಥೆಯ ಕೈಗಾರಿಕಾ ತರಬೇತಿಯಿಂದ ಒಂದು ವರ್ಷದ ಪ್ರಮಾಣಪತ್ರ ಮತ್ತು ಆಯಾ ವಿಭಾಗದಲ್ಲಿ ಒಂದು ವರ್ಷದ ಅನುಭವ ಹೊಂದಿರಬೇಕು. ಅಥವಾ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಎರಡು ವರ್ಷದ ಡಿಪ್ಲೋಮಾವನ್ನು ಆಯಾ ವಿಭಾಗಕ್ಕೆ ಸಂಬಂಧಪಟ್ಟಂತೆ ಪಡೆದಿರಬೇಕು.
ಅಭ್ಯರ್ಥಿಗಳ ವಯೋಮಿತಿಯು 2021ರ ಆಗಸ್ಟ್ 1ಕ್ಕೆ ಅನುಗುಣವಾಗಿ- 18ರಿಂದ 23ರ ನಡುವೆ ಇರಬೇಕು. ಅಭ್ಯರ್ಥಿಗಳನ್ನು ದೈಹಿಕ ಗುಣಮಟ್ಟ ಪರೀಕ್ಷೆ (PST), ದೈಹಿಕ ದಕ್ಷತೆ ಪರೀಕ್ಷೆ (PET), ದಾಖಲೆ ಪರಿಶೀಲನೆ, ಟ್ರೇಡ್ ಟೆಸ್ಟ್, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಬಿಎಸ್ಎಫ್ ವೆಬ್ ಸೈಟ್ bsf.gov.inಪರಿಶೀಲಿಸಬಹುದು.
ನೇರವಾಗಿ ಮೇಲೆ ತಿಳಿಸಲಾದ ಹುದ್ದೆಗಳ ಕುರಿತು ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ:
Ayush Department yoga trainer: ಆಯುಷ್ ಇಲಾಖೆಯಲ್ಲಿ ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನ
Published On - 1:18 pm, Sun, 16 January 22