BSF Recruitment 2022: ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ: ಆಯ್ಕೆಯಾದರೆ 69 ಸಾವಿರ ರೂ. ಸಂಬಳ

BSF Constable Recruitment 2022: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ಉತ್ತೀರ್ಣರಾಗಿರಬೇಕು ಅಥವಾ ವೃತ್ತಿಪರ ಸಂಸ್ಥೆಯಿಂದ ಐಟಿಐನಲ್ಲಿ 1 ವರ್ಷದ ಡಿಪ್ಲೊಮಾ ಮಾಡಿರಬೇಕು.

BSF Recruitment 2022: ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ: ಆಯ್ಕೆಯಾದರೆ 69 ಸಾವಿರ ರೂ. ಸಂಬಳ
BSF Constable Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 05, 2022 | 6:34 PM

BSF Constable Recruitment 2022: ಭಾರತೀಯ ಸೇನೆಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. BSF ಕಾನ್ಸ್‌ಟೇಬಲ್ (ಟ್ರೇಡ್ಸ್‌ಮೆನ್) (ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್‌ bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ- 2788

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ಉತ್ತೀರ್ಣರಾಗಿರಬೇಕು ಅಥವಾ ವೃತ್ತಿಪರ ಸಂಸ್ಥೆಯಿಂದ ಐಟಿಐನಲ್ಲಿ 1 ವರ್ಷದ ಡಿಪ್ಲೊಮಾ ಮಾಡಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 23 ವರ್ಷಗಳೊಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 21,700 ರಿಂದ 69,100 ರೂ.ವರೆಗೆ ವೇತನ ಸಿಗಲಿದೆ.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮಾರ್ಚ್ 1, 2022

ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.  . ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(BSF Constable Recruitment 2022: Bumper vacancy for these posts)