BSF Recruitment 2022: ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ: ತಿಂಗಳ ವೇತನ 69 ಸಾವಿರ ರೂ.

BSF Constable Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ಉತ್ತೀರ್ಣರಾಗಿರಬೇಕು ಅಥವಾ ವೃತ್ತಿಪರ ಸಂಸ್ಥೆಯಿಂದ ಐಟಿಐಯಲ್ಲಿ 1 ವರ್ಷದ ಡಿಪ್ಲೊಮಾ ಮಾಡಿರಬೇಕು.

BSF Recruitment 2022: ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ: ತಿಂಗಳ ವೇತನ 69 ಸಾವಿರ ರೂ.
BSF Constable Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 28, 2022 | 9:00 AM

BSF Constable Recruitment 2022: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಗಡಿ ಭದ್ರತಾ ಪಡೆ (BSF)ಯಲ್ಲಿನಲ್ಲಿನ ಕಾನ್ಸ್‌ಟೇಬಲ್ (ಟ್ರೇಡ್ಸ್‌ಮೆನ್) (ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್‌ bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (BSF 01 ಮಾರ್ಚ್ ಆಗಿದೆ. ಹೀಗಾಗಿ ಆದಷ್ಟು ಬೇಗ ಅರ್ಜಿ ಸಲ್ಲಿಸುವುದು ಉತ್ತಮ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

BSF Constable Recruitment 2022: ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 2788

BSF Constable Recruitment 2022: ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ಉತ್ತೀರ್ಣರಾಗಿರಬೇಕು ಅಥವಾ ವೃತ್ತಿಪರ ಸಂಸ್ಥೆಯಿಂದ ಐಟಿಐಯಲ್ಲಿ 1 ವರ್ಷದ ಡಿಪ್ಲೊಮಾ ಮಾಡಿರಬೇಕು.

BSF Constable Recruitment 2022: ವಯೋಮಿತಿ: 18 ರಿಂದ 23 ವರ್ಷಗಳೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

BSF Constable Recruitment 2022: ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 21,700 ರಿಂದ 69,100 ರೂ.ವರೆಗೆ ವೇತನ ನಿಗದಿ ಮಾಡಲಾಗುತ್ತದೆ.

BSF Constable Recruitment 2022: ಪ್ರಮುಖ ದಿನಾಂಕಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 1 ಮಾರ್ಚ್ 2022

BSF Constable Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(BSF Constable Recruitment 2022 For 2788 Posts)