BSF Recruitment 2023: ಗಡಿ ಭದ್ರತಾ ಪಡೆಯಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Feb 27, 2023 | 2:22 PM

BSF Constable Recruitment 2023: ಆಸಕ್ತ ಮತ್ತು ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ rectt.bsf.gov.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

BSF Recruitment 2023: ಗಡಿ ಭದ್ರತಾ ಪಡೆಯಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
BSF Recruitment 2023
Follow us on

BSF Recruitment 2023: ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿನ (BSF) ಕಾನ್ಸ್‌ಟೇಬಲ್ ಮತ್ತು ಹೆಡ್ ಕಾನ್‌ಸ್ಟೆಬಲ್ (ಪಶುವೈದ್ಯಕೀಯ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 26 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ rectt.bsf.gov.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಕಾನ್ಸ್‌ಟೇಬಲ್- 8 ಹುದ್ದೆಗಳು
  • ಹೆಡ್ ಕಾನ್‌ಸ್ಟೆಬಲ್ (ಪಶುವೈದ್ಯಕೀಯ)- 18 ಹುದ್ದೆಗಳು

ವಿದ್ಯಾರ್ಹತೆ:

  • BSF ಹೆಡ್ ಕಾನ್‌ಸ್ಟೆಬಲ್ (ಪಶುವೈದ್ಯಕೀಯ) ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೆಯೇ ಪಶುವೈದ್ಯಕೀಯ ಸ್ಟಾಕ್ ಅಸಿಸ್ಟೆಂಟ್‌ನಲ್ಲಿ ಒಂದು ವರ್ಷದ ಕೋರ್ಸ್ ಮಾಡಿರಬೇಕು. ಅಭ್ಯರ್ಥಿಗಳು ಕನಿಷ್ಠ 1 ವರ್ಷದ ಅನುಭವವನ್ನು ಹೊಂದಿರಬೇಕು.
  • ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಸರ್ಕಾರಿ ಪಶುವೈದ್ಯಕೀಯ ಆಸ್ಪತ್ರೆ / ಡಿಸ್ಪೆನ್ಸರಿ / ಪಶುವೈದ್ಯಕೀಯ ಕಾಲೇಜು / ಸರ್ಕಾರಿ ಫಾರ್ಮ್‌ನಿಂದ ಕನಿಷ್ಠ 2 ವರ್ಷಗಳ ಪ್ರಾಣಿ ನಿರ್ವಹಣೆ ಅನುಭವವನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – ರೂ.100/-
  • SC / ST / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ- ಯಾವುದೇ ಶುಲ್ಕವಿಲ್ಲ

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 6, 2023

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ:

18 ರಿಂದ 25 ವರ್ಷ ವಯಸ್ಸಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇನ್ನು ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.