BSF Recruitment 2022: ಪಿಯುಸಿ ಪಾಸಾದವರಿಗೆ ಗಡಿ ಭದ್ರತಾ ಪಡೆಯಲ್ಲಿದೆ ಉದ್ಯೋಗಾವಕಾಶ
BSF HC RO RM Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSFನ ಅಧಿಕೃತ ವೆಬ್ಸೈಟ್ bsf.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಧಾನ, ಅರ್ಹತಾ ಮಾನದಂಡಗಳು ಸೇರಿದಂತೆ ಇನ್ನಿತರ ಮಾಹಿತಿಗಳು ಈ ಕೆಳಗಿನಂತಿವೆ.
BSF Recruitment 2022: ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯ (BSF) ಹೆಡ್ ಕಾನ್‌ಸ್ಟೆಬಲ್ (ಮಿನಿಸ್ಟ್ರೀಯಲ್) ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಸ್ಟೆನೋಗ್ರಾಫರ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು ಒಟ್ಟು 323 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSFನ ಅಧಿಕೃತ ವೆಬ್ಸೈಟ್ bsf.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಧಾನ, ಅರ್ಹತಾ ಮಾನದಂಡಗಳು ಸೇರಿದಂತೆ ಇನ್ನಿತರ ಮಾಹಿತಿಗಳು ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
- ಹೆಡ್ ಕಾನ್‌ಸ್ಟೇಬಲ್ – 312 ಹುದ್ದೆಗಳು
- ಎಎಸ್‌ಐ – 11 ಹುದ್ದೆಗಳು
ವೇತನ:
- ಹೆಡ್ ಕಾನ್‌ಸ್ಟೇಬಲ್- ರೂ. 25500 ರಿಂದ ರೂ. 81100/
- ಎಎಸ್‌ಐ- ರೂ. 29200 ರಿಂದ ರೂ. 92300/
ಅರ್ಹತಾ ಮಾನದಂಡ:
- – ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
- -ಅಭ್ಯರ್ಥಿಗಳು ಟೈಪಿಂಗ್ ವೇಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗುತ್ತದೆ.
- – ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳು ಕೂಡ ಇರಲಿದೆ.
ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 25 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 6, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಭಾರತೀಯ ಗಡಿ ಭದ್ರತಾ ಪಡೆಯ ಅಧಿಕೃತ ವೆಬ್ಸೈಟ್ bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.