BSF Recruitment 2022: ಭಾರತೀಯ ಗಡಿ ಭದ್ರತಾ ಪಡೆಯಲ್ಲಿನ 1312 ಹುದ್ದೆಗಳಿಗೆ ಅರ್ಜಿ ಆಹ್ವಾನ
BSF recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
BSF Recruitment 2022: ಭಾರತೀಯ ಗಡಿ ಭದ್ರತಾ ಪಡೆಯಲ್ಲಿನ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಚಾಲ್ತಿಯಲ್ಲ್ಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 1312
- ಹೆಡ್ ಕಾನ್‌ಸ್ಟೆಬಲ್ (ರೇಡಿಯೋ ಆಪರೇಟರ್): 982 ಹುದ್ದೆಗಳು
- ಹೆಡ್ ಕಾನ್‌ಸ್ಟೆಬಲ್ (ರೇಡಿಯೋ ಮೆಕ್ಯಾನಿಕ್): 330 ಹುದ್ದೆಗಳು
ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪದವಿ ಮತ್ತು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಎರಡು ವರ್ಷಗಳ ಕೈಗಾರಿಕಾ ತರಬೇತಿ (ITI), ರೇಡಿಯೋ ಮತ್ತು ಟೆಲಿವಿಷನ್, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ ಅಥವಾ ಡೇಟಾ ತಯಾರಿ ಮತ್ತು ಕಂಪ್ಯೂಟರ್ ಸಾಫ್ಟ್‌ವೇರ್, ಜನರಲ್ ಎಲೆಕ್ಟ್ರಾನಿಕ್ಸ್ ಪ್ರಮಾಣಪತ್ರ ಹೊಂದಿರಬೇಕು. ಅಥವಾ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 60% ಅಂಕಗಳೊಂದಿಗೆ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರದೊಂದಿಗೆ 12 ನೇ ತರಗತಿ ಉತ್ತೀರ್ಣರಾದವರು ಕೂಡ ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಅಭ್ಯರ್ಥಿಗಳ ವಯೋಮಿತಿಯು 19ನೇ ಸೆಪ್ಟೆಂಬರ್ 2022 ರಂತೆ 18 ರಿಂದ 25 ವರ್ಷಗಳ ನಡುವೆ ಇರಬೇಕು.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25500 ರಿಂದ ರೂ 81100 ವೇತನವನ್ನು ನೀಡಲಾಗುತ್ತದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 19 ಸೆಪ್ಟೆಂಬರ್
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 5:31 pm, Thu, 15 September 22