BSF Recruitment 2023: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 69 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Feb 02, 2023 | 2:34 PM

BSF Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗಡಿ ಭದ್ರತಾ ಪಡೆಯ ಅಧಿಕೃತ ವೆಬ್​ಸೈಟ್​ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

BSF Recruitment 2023: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 69 ಸಾವಿರ ರೂ.
BSF Recruitment 2023
Follow us on

BSF Recruitment 2023: ಭಾರತೀಯ ಸೇನೆಯ ಗಡಿ ಭದ್ರತಾ ಪಡೆ (BSF) ವಿಭಾಗದಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 1410 ಕಾನ್ಸ್​ಟೇಬಲ್ (ಟ್ರೇಡ್ಸ್​ಮೆನ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗಡಿ ಭದ್ರತಾ ಪಡೆಯ ಅಧಿಕೃತ ವೆಬ್​ಸೈಟ್​ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಕಾನ್ಸ್​ಟೇಬಲ್ (ಪುರುಷ)- 1343 ಹುದ್ದೆಗಳು
ಕಾನ್ಸ್​ಟೇಬಲ್ (ಮಹಿಳೆ)- 67 ಹುದ್ದೆಗಳು

ಇದನ್ನೂ ಓದಿ
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದು. ಇನ್ನು ಕೆಲ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಜೊತೆ ಐಟಿಐ ಪ್ರಮಾಣ ಪತ್ರವೊಂದಿರಬೇಕೆಂದು ತಿಳಿಸಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ 18 ರಿಂದ 25 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ವಯಸ್ಸನ್ನು ಮಾರ್ಚ್​ 1, 2023ಕ್ಕೆ ಅನುಗುಣವಾಗಿ ಪರಿಗಣಿಸಲಾಗುತ್ತದೆ. ಇದಲ್ಲದೆ ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಇದನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 21,700 ರಿಂದ 69,100 ರೂ. ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್​ 1, 2023.

Also Read: Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.