AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSF Recruitment 2023: ಗಡಿ ಭದ್ರತಾ ಪಡೆ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

BSF Recruitment 2023: BSFನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ ಡಿಪ್ಲೊಮಾ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

BSF Recruitment 2023: ಗಡಿ ಭದ್ರತಾ ಪಡೆ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
HAL India Recruitment 2023
TV9 Web
| Edited By: |

Updated on:Jun 24, 2023 | 2:42 PM

Share

BSF Recruitment 2023: ಭಾರತೀಯ ಗಡಿ ಭದ್ರತಾ ಪಡೆಯ ಇನ್ಸ್‌ಪೆಕ್ಟರ್ (ಲೈಬ್ರರಿಯನ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಮೂಲಕ ಎರಡು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್​ಸೈಟ್ bsf.nic.in ​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಬಾರ್ಡರ್ ಸೆಕ್ಯುರಿಟಿ ಫೋರ್ಸ್ ( BSF )
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆ ಹೆಸರು: ಇನ್‌ಸ್ಪೆಕ್ಟರ್ (ಲೈಬ್ರೇರಿಯನ್)

ಶೈಕ್ಷಣಿಕ ಅರ್ಹತೆ:

BSFನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ  ಅಥವಾ ಡಿಪ್ಲೊಮಾ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 30 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಮೂರು ವರ್ಷಗಳಿಗಿಂತ ಕಡಿಮೆಯಿಲ್ಲದ ನಿಯಮಿತ ಮತ್ತು ನಿರಂತರ ಸೇವೆಯನ್ನು ಸಲ್ಲಿಸಿದ ಕೇಂದ್ರ ಸರ್ಕಾರಿ ನೌಕರರಿಗೆ (ಅನ್‌ರಿಸರ್ವ್ಡ್) 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

  • ಮಹಿಳೆಯರು/SC/ST ಮತ್ತು BSF ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವಿಲ್ಲ.
  • ಎಲ್ಲಾ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ: ರೂ.200/-

ಆಯ್ಕೆ ಪ್ರಕ್ರಿಯೆ:

ಮೆರಿಟ್ ಪಟ್ಟಿ, ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ. 44900 ರಿಂದ ರೂ. 142400/- ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-07-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: bsf.nic.in

Published On - 2:39 pm, Sat, 24 June 23

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ