BSF Recruitment 2023: ಭಾರತೀಯ ಗಡಿ ಭದ್ರತಾ ಪಡೆಯ ಇನ್ಸ್ಪೆಕ್ಟರ್ (ಲೈಬ್ರರಿಯನ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಮೂಲಕ ಎರಡು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್ಸೈಟ್ bsf.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಶೈಕ್ಷಣಿಕ ಅರ್ಹತೆ:
BSFನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ ಡಿಪ್ಲೊಮಾ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .
ವಯೋಮಿತಿ:
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 30 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮೂರು ವರ್ಷಗಳಿಗಿಂತ ಕಡಿಮೆಯಿಲ್ಲದ ನಿಯಮಿತ ಮತ್ತು ನಿರಂತರ ಸೇವೆಯನ್ನು ಸಲ್ಲಿಸಿದ ಕೇಂದ್ರ ಸರ್ಕಾರಿ ನೌಕರರಿಗೆ (ಅನ್ರಿಸರ್ವ್ಡ್) 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ:
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ, ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ. 44900 ರಿಂದ ರೂ. 142400/- ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-07-2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್ಸೈಟ್: bsf.nic.in
Published On - 2:39 pm, Sat, 24 June 23