BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.

BSNL JTO Recruitment 2023: ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತ್ ಸಂಚಾರ ನಿಗಮ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್​​ bsnl.co.in ಗೆ ಭೇಟಿ ನೀಡಿ ಅಪ್ಲಿಕೇಶನ್ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
BSNL Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 04, 2023 | 2:28 PM

BSNL Recruitment 2023: ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) 11,705 ಜೂನಿಯರ್ ಟೆಲಿಕಾಂ ಆಫೀಸರ್ (Junior Telecom Officer) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮತ್ತು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತ್ ಸಂಚಾರ ನಿಗಮ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್​​ bsnl.co.in ಗೆ ಭೇಟಿ ನೀಡಿ ಅಪ್ಲಿಕೇಶನ್ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಹುದ್ದೆಗಳ ಹೆಸರು ಮತ್ತು ಸಂಖ್ಯೆ: ಜೂನಿಯರ್ ಟೆಲಿಕಾಂ ಆಫೀಸರ್- 11,705 ಹುದ್ದೆಗಳು

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೂರಸಂಪರ್ಕ/ಎಲೆಕ್ಟ್ರಾನಿಕ್ಸ್/ರೇಡಿಯೊ/ಕಂಪ್ಯೂಟರ್/ಎಲೆಕ್ಟ್ರಿಕಲ್/ಐಟಿ/ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್, ಎಲೆಕ್ಟ್ರಾನಿಕ್ಸ್/ಸಿಎಸ್‌ಇಯಲ್ಲಿ ಎಂ.ಎಸ್ಸಿ ಪದವಿಯನ್ನು ಮಾಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ 20 ವರ್ಷದಿಂದ 30 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಮಾಸಿಕ ವೇತನ:

ಈ ಹುದ್ದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 16,400 ರಿಂದ 40,500 ರೂ. ರವರೆಗೆ ಸಂಬಳ ನೀಡಲಾಗುತ್ತದೆ.

ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ

ಅರ್ಜಿ ಶುಲ್ಕ: ಜೂನಿಯರ್ ಟೆಲಿಕಾಂ ಆಫೀಸರ್​ ಹುದ್ದೆಗಳ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಿಲ್ಲ.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್​ ಮಾಡಿ, ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

Registered Office- BSNL, New Delhi.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 31, 2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 2:22 pm, Wed, 4 January 23

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ