BSNL Recruitment 2022: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಉದ್ಯೋಗಗಳನ್ನು ಎದುರು ನೋಡುತ್ತಿರುವವರಿಗೆ ಹರ್ಯಾಣ ಬಿಎಸ್ಎನ್ಎಲ್ ವಿಭಾಗದಲ್ಲಿ ಉದ್ಯೋಗಾವಕಾಶವಿದೆ. ಈ ನೇಮಕಾತಿ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭರ್ತಿ ನಡೆಯಲಿದ್ದು, ಪದವಿ / ಡಿಪ್ಲೊಮಾ ಮಾಡಿದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSNL ನ ಅಧಿಕೃತ ವೆಬ್‌ಸೈಟ್ haryana.bsnl.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಈ ನೇಮಕಾತಿ ಅಡಿಯಲ್ಲಿ ಒಟ್ಟು 44 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಹುದ್ದೆಗಳ ಹೆಸರು:
ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು AICTE ಅಥವಾ ಭಾರತ ಸರ್ಕಾರ ಮತ್ತು UGC ಯಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಯಾವುದೇ ಸ್ಟ್ರೀಮ್‌ನಲ್ಲಿ ಪದವಿ (ತಾಂತ್ರಿಕ/ತಾಂತ್ರಿಕೇತರ) ಅಥವಾ ಡಿಪ್ಲೊಮಾ ಮಾಡಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ 25 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 19, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 4:01 pm, Thu, 14 July 22