BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

BSNL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSNL ನ ಅಧಿಕೃತ ವೆಬ್​ಸೈಟ್​ karnataka.bsnl.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
BSNL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 14, 2022 | 8:00 AM

BSNL Recruitment 2022: ಭಾರತ್ ಸಂಚಾರ ನಿಗಮ ಲಿಮಿಟೆಡ್​ನ (BSNL) ಅಪ್ರೆಂಟಿಸ್‌ಶಿಪ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಕರ್ನಾಟಕದಲ್ಲಿರುವ ಬಿಎಸ್​ಎನ್​ಎಲ್​ನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSNL ನ ಅಧಿಕೃತ ವೆಬ್​ಸೈಟ್​ karnataka.bsnl.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 100

ಅರ್ಹತಾ ಮಾನದಂಡಗಳು: ಅರ್ಜಿದಾರರು ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದಾದರು ವಿಷಯದಲ್ಲಿ ಪದವಿ ಅಥವಾ ಡಿಪ್ಲೊಮಾ ಮಾಡಿರಬೇಕು. ಅಂದರೆ ಡಿಗ್ರಿ ಪಾಸ್ ಆಗಿರುವ ಅಭ್ಯರ್ಥಿಗಳು ಹಾಗೂ ಡಿಪ್ಲೋಮಾ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಅರ್ಜಿಯ ಶಾರ್ಟ್‌ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ: ಈ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸ್ಟೈಫಂಡ್ ಆಗಿ 8 ರಿಂದ 9 ಸಾವಿರ ರೂ.ಗಳನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ- ಆಗಸ್ಟ್ 22, 2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 29, 2022

ಅರ್ಜಿ ಶುಲ್ಕ:

ಈ ಹುದ್ದಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಿಲ್ಲ.

ವಿಶೇಷ ಸೂಚನೆ: ಈ ಹುದ್ದೆಗಳ ನೇಮಕಾತಿಯನ್ನು ಕೇವಲ ಒಂದು ವರ್ಷದ ಅವಧಿಗೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.