BSNL Recruitment 2022: ಭಾರತ್ ಸಂಚಾರ ನಿಗಮ ಲಿಮಿಟೆಡ್ನ (BSNL) ಅಪ್ರೆಂಟಿಸ್‌ಶಿಪ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಕರ್ನಾಟಕದಲ್ಲಿರುವ ಬಿಎಸ್ಎನ್ಎಲ್ನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSNL ನ ಅಧಿಕೃತ ವೆಬ್ಸೈಟ್ karnataka.bsnl.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 100
ಅರ್ಹತಾ ಮಾನದಂಡಗಳು:
ಅರ್ಜಿದಾರರು ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದಾದರು ವಿಷಯದಲ್ಲಿ ಪದವಿ ಅಥವಾ ಡಿಪ್ಲೊಮಾ ಮಾಡಿರಬೇಕು. ಅಂದರೆ ಡಿಗ್ರಿ ಪಾಸ್ ಆಗಿರುವ ಅಭ್ಯರ್ಥಿಗಳು ಹಾಗೂ ಡಿಪ್ಲೋಮಾ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಅರ್ಜಿಯ ಶಾರ್ಟ್‌ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸ್ಟೈಫಂಡ್ ಆಗಿ 8 ರಿಂದ 9 ಸಾವಿರ ರೂ.ಗಳನ್ನು ನೀಡಲಾಗುತ್ತದೆ.
ಪ್ರಮುಖ ದಿನಾಂಕ:
ಅರ್ಜಿ ಶುಲ್ಕ:
ಈ ಹುದ್ದಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಿಲ್ಲ.
ವಿಶೇಷ ಸೂಚನೆ:
ಈ ಹುದ್ದೆಗಳ ನೇಮಕಾತಿಯನ್ನು ಕೇವಲ ಒಂದು ವರ್ಷದ ಅವಧಿಗೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.