BSNL Recruitment 2026: BSNLನಲ್ಲಿ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ನೇಮಕಾತಿ; 50 ಸಾವಿರ ರೂ. ರವರೆಗೆ ವೇತನ

ಬಿಎಸ್‌ಎನ್‌ಎಲ್ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಟೆಲಿಕಾಂಗೆ ಬಿ.ಇ/ಬಿ.ಟೆಕ್, ಹಣಕಾಸಿಗೆ ಸಿಎ/ಸಿಎಂಎ ಅರ್ಹತೆ ಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನಾಂಕ. ಆಯ್ಕೆ ಆನ್‌ಲೈನ್ ಪರೀಕ್ಷೆ ಮೂಲಕ ನಡೆಯಲಿದ್ದು, 24,900 ಯಿಂದ 50,500 ರೂ. ವೇತನ ಲಭ್ಯ. ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ ಈ ಉತ್ತಮ ಅವಕಾಶ ಬಳಸಿಕೊಳ್ಳಿ.

BSNL Recruitment 2026: BSNLನಲ್ಲಿ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ನೇಮಕಾತಿ; 50 ಸಾವಿರ ರೂ. ರವರೆಗೆ ವೇತನ
BSNLನಲ್ಲಿ ಉದ್ಯೋಗ

Updated on: Feb 15, 2026 | 6:01 PM

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ದೇಶಾದ್ಯಂತ ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರದ ಪ್ರತಿಷ್ಠಿತ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್‌ನಲ್ಲಿ ವೃತ್ತಿಜೀವನ ಆರಂಭಿಸಲು ಇದು ಒಳ್ಳೆಯ ಅವಕಾಶವಾಗಿದೆ. ಈ ನೇಮಕಾತಿಯಡಿ ಒಟ್ಟು 120 ಹುದ್ದೆಗಳು ಭರ್ತಿಯಾಗಲಿದ್ದು, ಅವುಗಳಲ್ಲಿ 95 ಟೆಲಿಕಾಂ ವಿಭಾಗಕ್ಕೆ ಮತ್ತು 25 ಹಣಕಾಸು ವಿಭಾಗಕ್ಕೆ ಸೇರಿವೆ.

ಟೆಲಿಕಾಂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಶೇ.60 ಅಂಕಗಳೊಂದಿಗೆ BE ಅಥವಾ B.Tech ಪದವಿ ಪಡೆದಿರಬೇಕು. ಹಣಕಾಸು ಹುದ್ದೆಗಳಿಗೆ CA ಅಥವಾ CMA ಅರ್ಹತೆ ಅಗತ್ಯವಿದೆ. ಜೊತೆಗೆ ಅಧಿಸೂಚನೆಯಲ್ಲಿ ಸೂಚಿಸಿದಂತೆ ಸಂಬಂಧಿತ ಕೆಲಸದ ಅನುಭವವೂ ಬೇಕಾಗುತ್ತದೆ. ಅಭ್ಯರ್ಥಿಗಳ ವಯಸ್ಸು ಮಾರ್ಚ್ 7, 2026ರಂತೆ 21ರಿಂದ 30 ವರ್ಷಗಳೊಳಗಿರಬೇಕು. OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು PwBD ಅಭ್ಯರ್ಥಿಗಳಿಗೆ ಗರಿಷ್ಠ 15 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕವಾಗಿ ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳು 2,500ರೂ. ಪಾವತಿಸಬೇಕು. SC, ST ಮತ್ತು PwBD ಅಭ್ಯರ್ಥಿಗಳಿಗೆ 1,250ರೂ. ನಿಗದಿಪಡಿಸಲಾಗಿದೆ. ಅಂತಿಮ ಆಯ್ಕೆ ಆನ್‌ಲೈನ್ ಲಿಖಿತ ಪರೀಕ್ಷೆಯ ಆಧಾರವಾಗಿರುತ್ತದೆ. ಆಯ್ಕೆಯಾದವರಿಗೆ ತಿಂಗಳಿಗೆ 24,900ರಿಂದ 50,500 ರೂ. ರವರೆಗೆ ವೇತನ ನೀಡಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 7 ರಾತ್ರಿ 10 ಗಂಟೆಯವರೆಗೆ ಅವಕಾಶವಿದೆ. ಅರ್ಜಿ ತಿದ್ದುಪಡಿ ಮಾರ್ಚ್ 8ರಿಂದ ಮಾರ್ಚ್ 15ರವರೆಗೆ ಅವಕಾಶವಿದೆ. ಲಿಖಿತ ಪರೀಕ್ಷೆ ಮಾರ್ಚ್ 29 ರಂದು ನಡೆಯಲಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸರ್ಕಾರಿ ಕ್ಷೇತ್ರದಲ್ಲಿ ಉತ್ತಮ ಭವಿಷ್ಯವನ್ನು ಕನಸು ಕಾಣುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಹತೆಗಳನ್ನು ಪರಿಶೀಲಿಸುವುದು ಮುಖ್ಯ.

ಬಿಎಸ್ಎನ್ಎಲ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ