India Post Recruitment 2022: ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುರ್ವಣಾವಕಾಶ. ಏಕೆಂದರೆ ಭಾರತೀಯ ಅಂಚೆ ಇಲಾಖೆಯು ಸ್ಟಾಫ್ ಕಾರ್ ಡ್ರೈವರ್ (India Post Recruitment 2022) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಮಾರ್ಚ್ 15 ರೊಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
India Post Recruitment 2022: ಒಟ್ಟು ಹುದ್ದೆಗಳು:
ಈ ನೇಮಕಾತಿ ಅಡಿಯಲ್ಲಿ ಒಟ್ಟು 29 ಸ್ಟಾಫ್ ಕಾರ್ ಡ್ರೈವರ್ಗಳನ್ನು ಆಯ್ಕೆ ಮಾಡಲಾಗುತ್ತದೆ.
India Post Recruitment 2022: ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹೆಚ್ಚುವರಿಯಾಗಿ, ಅಭ್ಯರ್ಥಿಯು ಚಾಲನಾ ಪರವಾನಗಿಯನ್ನು ಸಹ ಹೊಂದಿರಬೇಕು.
India Post Recruitment 2022: ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 27 ವರ್ಷಗಳ ನಡುವೆ ಇರಬೇಕು. ಹಾಗೆಯೇ ಗರಿಷ್ಠ ವಯಸ್ಸಿನ ಮಿತಿಯಲ್ಲಿ, OBC ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.
India Post Recruitment 2022: ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಹೊರಡಿಸಲಾದ ಅಧಿಸೂಚನೆಯನ್ನು ಪರಿಶೀಲಿಸಬಹುದು.
India Post Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅದರಂತೆ ಈ ಕೆಳಗಿನ ವಿಳಾಸದಲ್ಲಿ ಅರ್ಜಿ ಸಲ್ಲಿಸಬೇಕು.
India Post Recruitment 2022: ಅರ್ಜಿ ಸಲ್ಲಿಸಬೇಕಾದ ವಿಳಾಸ?
To,
The Senior Manager ,
Mail Motor Service, C-121,
Naraina Industrial Area phase-I,
Naraina, New Delhi -110028
ಅರ್ಜಿ ಹಾಗೂ ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ
ಇದನ್ನೂ ಓದಿ: Yuzvendra Chahal: ವಿಕೆಟ್ಗಳ ಶತಕ ಪೂರೈಸಿದ ಚಹಾಲ್
ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್ಮ್ಯಾನ್ ರೋಹಿತ್ ಶರ್ಮಾ
ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!