BIS Recruitment 2022: ಬಿಐಎಸ್ ನೇಮಕಾತಿ: ತಿಂಗಳ ವೇತನ 99 ಸಾವಿರ ರೂ.
Bureau of Indian Standards (BIS) Recruitment 2022: ಆಸಕ್ತರು ಅಧಿಕೃತ ವೆಬ್‌ಸೈಟ್ bis.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಅರ್ಹತೆ, ಆಯ್ಕೆ ವಿಧಾನ ಮತ್ತು ಇತರ ವಿಷಯಗಳ ಕುರಿತು ವಿವರಗಳನ್ನು ಕೆಳಗೆ ನೀಡಲಾಗಿದೆ.
BIS Recruitment 2022: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಥವಾ IBS ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ bis.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಅರ್ಹತೆ, ಆಯ್ಕೆ ವಿಧಾನ ಮತ್ತು ಇತರ ವಿಷಯಗಳ ಕುರಿತು ವಿವರಗಳನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರಗಳು:
- ಒಟ್ಟು ಹುದ್ದೆಗಳ ಸಂಖ್ಯೆ- 16
- ಸೈಂಟಿಸ್ಟ್ ಬಿ ಅಗ್ರಿಕಲ್ಚರಲ್ ಇಂಜಿನಿಯರಿಂಗ್ : 2 ಹುದ್ದೆಗಳು
- ಸೈಂಟಿಸ್ಟ್ ಬಿ ಬಯೋ-ಮೆಡಿಕಲ್ ಇಂಜಿನಿಯರಿಂಗ್: 2 ಹುದ್ದೆಗಳು
- ಸೈಂಟಿಸ್ಟ್ ಬಿ ರಸಾಯನಶಾಸ್ತ್ರ: 4 ಹುದ್ದೆಗಳು
- ಸೈಂಟಿಸ್ಟ್ ಬಿ ಕಂಪ್ಯೂಟರ್ ಇಂಜಿನಿಯರಿಂಗ್: 2 ಹುದ್ದೆಗಳು
- ಸೈಂಟಿಸ್ಟ್ ಬಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್: 4 ಹುದ್ದೆಗಳು
- ಸೈಂಟಿಸ್ಟ್ ಬಿ ಎನ್ವಿರಾನ್ಮೆಂಟ್ ಇಂಜಿನಿಯರಿಂಗ್: 2 ಹುದ್ದೆಗಳು
ಅರ್ಹತಾ ಮಾನದಂಡ: ಮೇಲೆ ತಿಳಿಸಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪರಿಶೀಲಿಸಿ. ಇಲ್ಲಿ ಆಯಾ ಹುದ್ದೆಗಳಿಗೆ ವಿಭಿನ್ನ ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ: ಈ ಹುದ್ದೆಗಳಿಗೆ 21 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ತಿಂಗಳ ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ ರೂ 99,699/- ನೀಡಲಾಗುತ್ತದೆ.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಯಾವುದೇ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕವನ್ನು ಪಾವತಿಸಬೇಕಿಲ್ಲ.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 26, 2022
ಅರ್ಜಿ ಸಲ್ಲಿಸುವುದು ಹೇಗೆ? ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕೃತ ವೆಬ್‌ಸೈಟ್ bis.gov.in ಭೇಟಿ ನೀಡುವ ಮೂಲಕ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೆಯೇ ಇತರೆ ಯಾವುದೇ ವಿಧಾನ/ಮೋಡ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.