ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಇಲ್ಲಿದೆ ಉತ್ತಮ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ?

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಏಪ್ರಿಲ್ 19 ರಿಂದ ಮೇ 9 ರವರೆಗೆ ಸಲಹೆಗಾರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸಂಬಂಧಿತ ಕ್ಷೇತ್ರದಲ್ಲಿ ಪದವಿ ಹೊಂದಿರುವ ಮತ್ತು 65 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಶೈಕ್ಷಣಿಕ ಅರ್ಹತೆ, ತಾಂತ್ರಿಕ ಮೌಲ್ಯಮಾಪನ ಮತ್ತು ಸಂದರ್ಶನವನ್ನು ಒಳಗೊಂಡಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 75,000 ರೂ. ಮಾಸಿಕ ವೇತನ ನೀಡಲಾಗುವುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.

ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಇಲ್ಲಿದೆ ಉತ್ತಮ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ?
Bureau Of Indian Standards Hiring Consultants

Updated on: Apr 23, 2025 | 4:01 PM

ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಇದು ಒಂದು ಉತ್ತಮ ಅವಕಾಶ. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಸಲಹೆಗಾರ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಏಪ್ರಿಲ್ 19 ಪ್ರಾರಂಭವಾಗಿದ್ದು ಆಸಕ್ತ ಅಭ್ಯರ್ಥಿಗಳು ಮೇ 9 ರವರೆಗೆ ಅರ್ಜಿ ಸಲ್ಲಿಸಬಹುದು. BIS ನ ಅಧಿಕೃತ ವೆಬ್‌ಸೈಟ್ bis.gov.in ನಲ್ಲಿ ಆನ್‌ಲೈನ್ ಮೋಡ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಇಲ್ಲಿ ನೀಡಿರುವ ಹಂತಗಳ ಮೂಲಕವೂ ಅರ್ಜಿ ಸಲ್ಲಿಸಬಹುದು.

ಅಗತ್ಯವಿರುವ ಶೈಕ್ಷಣಿಕ ಅರ್ಹತೆ:

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಸಂಬಂಧಿತ ಕ್ಷೇತ್ರದಲ್ಲಿ ಕೃಷಿ ವಿಜ್ಞಾನ / ಬಿ.ಟೆಕ್ / ಬಿಇ / ಬಿಎನ್‌ವೈಎಸ್ / ಸ್ನಾತಕೋತ್ತರ ಪದವಿ ಹೊಂದಿರಬೇಕು.

ವಯಸ್ಸಿನ ಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳನ್ನು ಮೀರಿರಬಾರದು. ಮೀಸಲಾತಿ ವರ್ಗಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಆಯ್ಕೆ ಹೇಗೆ ಮಾಡಲಾಗುತ್ತದೆ?

ಅರ್ಜಿದಾರರನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಇದರ ನಂತರ, ಆಯ್ಕೆಯಾದ ಅಭ್ಯರ್ಥಿಗಳನ್ನು ತಾಂತ್ರಿಕ ಮೌಲ್ಯಮಾಪನ ಮತ್ತು ಸಂದರ್ಶನಕ್ಕೆ ಕರೆಯಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ಸಲಹೆಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75 ಸಾವಿರ ರೂ. ವೇತನ ಸಿಗಲಿದೆ. ಈ ಕೆಲಸವು ಸಂಪೂರ್ಣವಾಗಿ ಒಪ್ಪಂದ ಆಧಾರಿತವಾಗಿದೆ.

ಇದನ್ನೂ ಓದಿ: ಕಸದ ಬುಟ್ಟಿಯಲ್ಲಿ ಸಿಕ್ಕಿದ್ದ ಅಂಧ ಮಗು ಇಂದು ಅಸಿಸ್ಟಂಟ್ ಕಲೆಕ್ಟರ್

ಅರ್ಜಿ ಸಲ್ಲಿಸುವುದು ಹೇಗೆ?

  • ಅಭ್ಯರ್ಥಿಗಳು ಮೊದಲು ಬಿಐಎಸ್‌ನ ಅಧಿಕೃತ ವೆಬ್‌ಸೈಟ್‌ bis.gov.in ಗೆ ಭೇಟಿ ನೀಡಬೇಕು.
  • ನಂತರ ಮುಖಪುಟದಲ್ಲಿ “ನೇಮಕಾತಿ” ವಿಭಾಗಕ್ಕೆ ಹೋಗಿ ಮತ್ತು ಸಂಬಂಧಿತ ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಈಗ “ಖಾತೆ ರಚಿಸಿ” ಮೇಲೆ ಕ್ಲಿಕ್ ಮಾಡಿ, ಅಗತ್ಯವಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ನೋಂದಾಯಿಸಿ.
  • ಅಭ್ಯರ್ಥಿಗಳು ನಂತರ ಲಾಗಿನ್ ಆಗಿ ಸಂಪೂರ್ಣ ಫಾರ್ಮ್ ಅನ್ನು ಭರ್ತಿ ಮಾಡಬೇಕು.
  • ನಂತರ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ