ಕೇಂದ್ರ ಸರ್ಕಾರದ ಅಡಿಯಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತ ಸರ್ಕಾರದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಸಿಎಜಿ) ಸಹಾಯಕ ನಿರ್ದೇಶಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯು ಡೆಪ್ಯುಟೇಶನ್ ಆಧಾರದ ಮೇಲೆ ನಡೆಯಲಿದ್ದು, ಅರ್ಹ ಅಭ್ಯರ್ಥಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಅರ್ಹತಾ ಮಾನದಂಡಗಳು:
ಪೇ ಮ್ಯಾಟ್ರಿಕ್ಸ್‌ನ ಹಂತ 10ರಲ್ಲಿ 05 ವರ್ಷಗಳ ನಿಯಮಿತ ಸೇವೆಯನ್ನು ಸಲ್ಲಿಸಿದ ಅಧಿಕಾರಿ ಆಗಿರಬೇಕು. ಅಥವಾ..
ಪೇ ಮ್ಯಾಟ್ರಿಕ್ಸ್‌ನ ಹಂತ 08ರಲ್ಲಿ 06 ವರ್ಷಗಳ ನಿಯಮಿತ ಸೇವೆಯನ್ನು ಸಲ್ಲಿಸಿರಬೇಕು.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಹಾಗೆಯೇ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಆಡಳಿತಾತ್ಮಕ ವಿಷಯಗಳಲ್ಲಿ ಏಳು ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗೆ ಗರಿಷ್ಠ ವಯೋಮಿತಿ 56 ವರ್ಷಗಳು.
ಪ್ರಮುಖ ದಿನಾಂಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 4, 2022.
ಅರ್ಜಿ ಸಲ್ಲಿಸುವುದು ಹೇಗೆ?
ಎಲ್ಲಾ ಅಗತ್ಯ ವಿವರಗಳನ್ನು (ದಾಖಲೆಗಳು/ಪ್ರಮಾಣಪತ್ರಗಳು) ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ. ಜುಲೈ 4 ರ ಬಳಿಕ ಸ್ವೀಕರಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ಕಳುಹಿಸಬೇಕಾದ ವಿಳಾಸ:
Asstt. Comptroller and Auditor General (N)-1, Deen Dayal Upadhyaya Marg, New Delhi-110124.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.