AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Canara Bank Recruitment: ಕೆನರಾ ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ

ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ ಹಾಗೂ ಅರ್ಜಿ ಸಲ್ಲಿಸಿ.

Canara Bank Recruitment: ಕೆನರಾ ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ
Canara Bank
ಅಕ್ಷತಾ ವರ್ಕಾಡಿ
|

Updated on:Feb 01, 2025 | 12:23 PM

Share

ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯು ಜನವರಿ 30 ರಂದು ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಏನು?

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಕನಿಷ್ಟ ಶೇ. 60 ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು, ಆದರೆ SC/ST/OBC/PWBD ವರ್ಗದ ಅಭ್ಯರ್ಥಿಗಳಿಗೆ ಶೇ. 5ರಷ್ಟು ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸಲು, ಅಭ್ಯರ್ಥಿಯ ವಯಸ್ಸು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳು. ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು. ಎಲ್ಲಾ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750 ರೂ., ಆದರೆ SC/ST/PWBD ವರ್ಗದ ಅಭ್ಯರ್ಥಿಗಳಿಗೆ ಶುಲ್ಕವನ್ನು 150 ರೂ.ಗಳಲ್ಲಿ ಇರಿಸಲಾಗಿದೆ. ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಮಾತ್ರ ಠೇವಣಿ ಮಾಡಬಹುದು.

ಇದನ್ನೂ ಓದಿ: ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶ; ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ IBPS ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ibpsonline.ibps.in/cbicojan25/
  • ಮುಖಪುಟದಲ್ಲಿ “ಹೊಸ ನೋಂದಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.
  • ನಂತರ ಅಗತ್ಯವಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನೋಂದಾಯಿಸಿ ನಂತರ ಉಳಿದ ವಿವರಗಳನ್ನು ಭರ್ತಿ ಮಾಡಿ ಸಹಿ ಮತ್ತು ಫೋಟೋ ಅಪ್‌ಲೋಡ್ ಮಾಡಿ ನಿಗದಿತ ಹಣವನ್ನು ಪಾವತಿಸಿ.
  • ಆನ್‌ಲೈನ್‌ನಲ್ಲಿ ಶುಲ್ಕ ವಿಧಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Sat, 1 February 25

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು