Canara Bank Recruitment 2023: ಕೆನರಾ ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
Canara Bank Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆನೆರಾ ಬ್ಯಾಂಕ್ನ ಅಧಿಕೃತ ವೆಬ್ಸೈಟ್ www.canarabank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
Canara Bank Recruitment 2023: ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ರೆ ಕೆನರಾ ಬ್ಯಾಂಕ್ನಲ್ಲಿದೆ ಉದ್ಯೋಗಾವಕಾಶ. ಕೆನರಾ ಬ್ಯಾಂಕ್ ಒಟ್ಟು ಚೀಫ್ ಡಿಜಿಟಲ್ ಆಫೀಸರ್, ಚೀಫ್ ಟೆಕ್ನಾಲಜಿ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ನ ಅಧಿಕೃತ ವೆಬ್ಸೈಟ್ www.canarabank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO)- 1 ಹುದ್ದೆ
- ಚೀಫ್ ಡಿಜಿಟಲ್ ಆಫೀಸರ್(CDO)- 1 ಹುದ್ದೆ
- ಚೀಫ್ ಟೆಕ್ನಾಲಜಿ ಆಫೀಸರ್(CTO)- 1 ಹುದ್ದೆ
ಅರ್ಹತಾ ಮಾನದಂಡಗಳು:
- ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO)- ಈ ಹುದ್ದೆಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಚೀಫ್ ಡಿಜಿಟಲ್ ಆಫೀಸರ್ (CDO)- ಈ ಹುದ್ದೆಗಳಿಗೆ ಬಿಇ/ಬಿ.ಟೆಕ್ ಹಾಗೂ ಎಂಸಿಎ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಚೀಫ್ ಟೆಕ್ನಾಲಜಿ ಆಫೀಸರ್(CTO)- ಪದವಿ ಅಥವಾ ಬಿಇ/ಬಿ.ಟೆಕ್ ಅಥವಾ ಎಂಸಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ
ವಯೋಮಿತಿ:
- ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO)- ಈ ಹುದ್ದೆಗಳಿಗೆ 55 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಚೀಫ್ ಡಿಜಿಟಲ್ ಆಫೀಸರ್ (CDO)- ಈ ಹುದ್ದೆಗಳಿಗೆ 40 ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಚೀಫ್ ಟೆಕ್ನಾಲಜಿ ಆಫೀಸರ್ (CTO)- ಈ ಹುದ್ದೆಗಳಿಗೆ 40 ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಲಾಗುತ್ತದೆ. ಆ ಬಳಿಕ ಸಂದರ್ಶನ ನಡೆಯಲಿದ್ದು, ಇದರಲ್ಲಿ ಪಾಸಾಗುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ- ಮಾರ್ಚ್ 6, 2023
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 2:12 pm, Sun, 19 February 23