CAPF: ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎಪಿಎಫ್ ಹುದ್ದೆ ನೇಮಕಾತಿ ಪರೀಕ್ಷೆಗೆ ಅವಕಾಶ
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸು ನಿಟ್ಟಿನಲ್ಲಿ ಸಿಎಪಿಎಫ್ ಕಾನ್ಸ್‌ಟೇಬಲ್ ನೇಮಕಾತಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ಕಲ್ಪಿಸಿದೆ. ಫೆಬ್ರವರಿ 20 ರಿಂದ ಮಾರ್ಚ್ 7 ರ ವರೆಗೆ 128 ನಗರಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಕಾನ್‌ಸ್ಟೆಬಲ್‌ಗಳ ನೇಮಕಾತಿ ಪರೀಕ್ಷೆ ನಡೆಯಲಿದೆ.
ದೆಹಲಿ, ಫೆಬ್ರವರಿ 11: ಸಿಎಪಿಎಫ್ (CAPFs) ಕಾನ್ಸ್‌ಟೇಬಲ್ ನೇಮಕಾತಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ಕಲ್ಪಿಸಿದೆ. ಮುಂದಿನ ವಾರದಿಂದ ನಡೆಯಲಿರುವ ಕಾನ್‌ಸ್ಟೆಬಲ್ (ಜಿಡಿ) ನೇಮಕಾತಿ ಪರೀಕ್ಷೆಗೆ ಈಗಾಗಲೇ ಸುಮಾರು ಐದು ಮಿಲಿಯನ್ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದು, ಲಿಖಿತ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಹೊರತುಪಡಿಸಿ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ, ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಫೆಬ್ರವರಿ 20 ರಿಂದ ಮಾರ್ಚ್ 7 ರ ವರೆಗೆ 128 ನಗರಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್‌ಸ್ಟೆಬಲ್‌ಗಳ ನೇಮಕಾತಿ ಪರೀಕ್ಷೆ ನಡೆಯಲಿದೆ. ಇದೇ ಮೊದಲ ಬಾರಿಗೆ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುತ್ತಿದೆ. ಇಲ್ಲಿಯವರೆಗೆ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆಗೆ ಅವಕಾಶವಿತ್ತು.
ರಾಜಕೀಯ ನಾಯಕರ ಒತ್ತಾಯ
‘ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ಮೇರೆಗೆ ಈ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ ಎಂದು ಅಧಿಕೃತ ವಕ್ತಾರರು ತಿಳಿಸಿರುವುದಾಗಿ ವರದಿ ಆಗಿದೆ. ಕಳೆದ ಹಲವಾರು ವರ್ಷಗಳಿಂದ, ದಕ್ಷಿಣ ಮತ್ತು ಈಶಾನ್ಯ ರಾಜ್ಯಗಳ ಅನೇಕ ರಾಜಕೀಯ ನಾಯಕರು ಕಾನ್ಸ್‌ಟೇಬಲ್ (ಜಿಡಿ) ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕೆಂದು ಒತ್ತಾಯಿಸಿದ್ದರು.
ಇದನ್ನೂ ಓದಿ: ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ನೇರ ಲಿಂಕ್
‘ಕಾನ್ಸ್‌ಟೇಬಲ್ (ಜಿಡಿ) ಪರೀಕ್ಷೆಯು ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ನಡೆಸುವ ಪ್ರಮುಖ ಪರೀಕ್ಷೆಗಳಲ್ಲಿ ಒಂದು. ಇದು ದೇಶಾದ್ಯಂತ ಲಕ್ಷಾಂತರ ಯುವಕರು ಈ ಹುದ್ದೆಗೆ ಪ್ರಯತ್ನಿಸುತ್ತಿದ್ದಾರೆ. ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುವಂತೆ ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಎಸ್‌ಎಸ್‌ಸಿ ಎಂಒಯುಗೆ ಸಹಿ ಹಾಕಿದೆ. ಅದರಂತೆ, ಎಸ್‌ಎಸ್‌ಸಿ ಕಾನ್ಸ್‌ಟೇಬಲ್ (ಜಿಡಿ) ಪರೀಕ್ಷೆ, 2024, ಇಂಗ್ಲಿಷ್ ಮತ್ತು ಹಿಂದಿ ಜೊತೆಗೆ ಇತರೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಅಧಿಸೂಚನೆಯನ್ನು ಹೊರಡಿಸಿದೆ.
ಇದನ್ನೂ ಓದಿ: Indian Railways Jobs 2024: ಭಾರತೀಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಗಳು -2024 ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಹೀಗಿದೆ ನೋಡಿ
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF), ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF), ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ನಂತಹ ಪಡೆಗಳಿಗೆ ನೇಮಕಾತಿಗಾಗಿ ಎಸ್‌ಎಸ್‌ಸಿ ಪ್ರತಿ ವರ್ಷ ಪರೀಕ್ಷೆಯನ್ನು ನಡೆಸುತ್ತದೆ. ಈ ಸಶಸ್ತ್ರ ಪಡೆಗಳನ್ನು ಕಾನೂನು ಮತ್ತು ಸುವ್ಯವಸ್ಥೆ, ಆಂತರಿಕ ಭದ್ರತೆ, ಪ್ರತಿದಾಳಿ, ಗಡಿಗಳನ್ನು ರಕ್ಷಿಸುವುದು ಮತ್ತು ದೇಶಾದ್ಯಂತ ಪ್ರಮುಖ ಸ್ಥಾಪನೆಗಳ ಭದ್ರತೆಯಿಂದ ಹಿಡಿದು ವಿವಿಧ ಕರ್ತವ್ಯಗಳಿಗಾಗಿ ನಿಯೋಜಿಸಲಾಗುತ್ತದೆ.
ಸರ್ಕಾರದ ಅಂಕಿಅಂಶಗಳ ಪ್ರಕಾರ ಆರು CAPF ಗಳಲ್ಲಿ 70,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. BSF, CRPF, CISF, ITBP, SSB ಮತ್ತು ಅಸ್ಸಾಂ ರೈಫಲ್ಸ್. ನಿಖರವಾಗಿ ಹೇಳುವುದಾದರೆ, ಈ ಎಲ್ಲಾ ಖಾಲಿ ಹುದ್ದೆಗಳು ಕಾನ್‌ಸ್ಟೆಬಲ್ (ಜಿಡಿ) ಶ್ರೇಣಿಯಲ್ಲಿಲ್ಲ ಆದರೆ ಇತರೆ ಶ್ರೇಣಿಗಳಲ್ಲಿವೆ. ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಯನ್ನು ಎಸ್‌ಎಸ್‌ಸಿ ನಿಯಮಿತವಾಗಿ ನಡೆಸುತ್ತದೆ.
ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.