Central Bank of India Recruitment 2023: ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಅವಕಾಶ

| Updated By: ಝಾಹಿರ್ ಯೂಸುಫ್

Updated on: Jul 24, 2023 | 2:05 PM

Central Bank of India Recruitment 2023: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, 21 ರಿಂದ 45 ವರ್ಷಗಳವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Central Bank of India Recruitment 2023: ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಅವಕಾಶ
Central Bank of India Recruitment 2023
Follow us on

Central Bank of India Recruitment 2023: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ (Central Bank of India) ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಬಿಸಿನೆಸ್ ಕರೆಸ್ಪಾಂಡೆಂಟ್ ಮೇಲ್ವಿಚಾರಕರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಬ್ಯಾಂಕ್ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
  • ಹುದ್ದೆಗಳ ಸಂಖ್ಯೆ: 1
  • ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಬೆಂಗಳೂರು
  • ಹುದ್ದೆಯ ಹೆಸರು: ಬಿಸಿನೆಸ್ ಕರೆಸ್ಪಾಂಡೆಂಟ್ ಸೂಪರ್​ವೈಸರ್ಸ್​

ಶೈಕ್ಷಣಿಕ ಅರ್ಹತೆ:

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , BE, M.Sc, MCA, MBA ಪೂರ್ಣಗೊಳಿಸಿರಬೇಕು.

ವಯೋಮಿತಿ:

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, 21 ರಿಂದ 45 ವರ್ಷಗಳವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ರೂ.12000 ರಿಂದ ರೂ. 15000 ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-ಜುಲೈ-2023

ಇದನ್ನೂ ಓದಿ: IREL Recruitment 2023: ಐಆರ್​ಇಎಲ್ ನೇಮಕಾತಿ: ಆರಂಭಿಕ ವೇತನ 40 ಸಾವಿರ ರೂ.

ಅರ್ಜಿ ಕಳುಹಿಸಬೇಕಾದ ವಿಳಾಸ:

Central Bank of India, Regional Office Bangalore, 2nd Floor, Grand Majestic Mall Gandhinagar, Bengaluru – 560009.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: centralbankofindia.co.in